ಮಕ್ಕಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಅಗತ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ

KannadaprabhaNewsNetwork | Published : Feb 24, 2024 2:34 AM

ಸಾರಾಂಶ

ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಬಹಳ ಅಗತ್ಯ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಶಾಲಾ ಮಕ್ಕಳಿಗೆ ಸಾಯಿ ಅನ್ನಪೂರ್ಣ ಟ್ರಸ್ಟ್ ರಾಗಿಯಿಂದ ತಯಾರಿಸಿದ ಸಾಯಿ ಶೂರ್ ಪೋಷಕಾಂಶ ಭರಿತ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

ಮಕ್ಕಳಿಗೆ ಹಾಲು ವಿತರಣೆ

ಅರಸೀಕೆರೆ: ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಬಹಳ ಅಗತ್ಯ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು

ನಗರದ ಜೇನುಕಲ್ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಾಯಿ ಅನ್ನಪೂರ್ಣ ಟ್ರಸ್ಟ್ ರಾಗಿಯಿಂದ ತಯಾರಿಸಿದ ಸಾಯಿ ಶೂರ್ ಪೋಷಕಾಂಶ ಭರಿತ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿ ಮಾತನಾಡಿ, ಸರ್ಕಾರ ಹಾಗೂ ಸತ್ಯಸಾಯಿ ಟ್ರಸ್ಟ್ ಸಹಭಾಗಿತ್ವದಲ್ಲಿ ಇದನ್ನು ವಿತರಿಸಲಾಗುತ್ತಿದ್ದು ಸತ್ಯಸಾಯಿ ಟ್ರಸ್ಟ್ ಉಚಿತವಾಗಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು

ಇಂಗ್ಲೀಷ್ ಇಂದು ಬಹಳ ಅಗತ್ಯವಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಜ್ಞಾನವುಳ್ಳ ಶಿಕ್ಷಕರನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಜ್ಞಾನವನ್ನು ನೀಡಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರಿ ಶಾಲಾ ಮಕ್ಕಳಿಗೆ ಇಂಗ್ಲಿಷ್ ಅಗತ್ಯ ಎಂದು ಪೋಷಕರು ಮತ್ತು ಸಾರ್ವಜನಿಕರ ಅಭಿಪ್ರಾಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸಲು ರಾಜಕಾರಣಿಗಳೇ ಅಡ್ಡಿಯಾಗುತ್ತಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ 24,271 ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಲಿದ್ದಾರೆ. ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಉಚಿತವಾಗಿ ನೀಡುತ್ತಿದ್ದು ಸರ್ಕಾರದ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನವಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉತ್ತಮ ಆರೋಗ್ಯ ಇದ್ದಾಗ ಮನಸ್ಸು ಉಲ್ಲಾಸದಾಯಕವಾಗಿರುತ್ತದೆ. ತರಗತಿಯಲ್ಲಿ ಶಿಕ್ಷಕರು ಬೋಧಿಸಿದ್ದನ್ನು ಗ್ರಹಿಸಲು ಸಹ ಅವರು ಸಮರ್ಥರಾಗುತ್ತಾರೆ. ಇಂದು ನೀಡುತ್ತಿರುವ ಈ ಪೋಷಕಾಂಶ ವಿದ್ಯಾರ್ಥಿಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಿದರು

ಸಭೆಯಲ್ಲಿ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಅಧಿಕಾರಿ ಶಂಕರ್, ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಯೋಗೇಶ್, ಶಿಕ್ಷಣ ಸಂಯೋಜಕ ಮಲ್ಲೇಶ್, ಬಿಆರ್‌ಪಿಗಳು, ಸಿಆರ್‌ಪಿಗಳು, ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಪ್ಪ ಉಪಸ್ಥಿತರಿದ್ದರು.ಅರಸೀಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಾಯಿ ಶೂರ್ ಪೋಷಕಾಂಶ ಭರಿತ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.

Share this article