ಕನ್ನಡಪ್ರಭವಾರ್ತೆ ತಿಪಟೂರು
ನಗರ ಟೌನ್ ವ್ಯಾಪ್ತಿ ಬಿಆರ್‌ಸಿ ಕೇಂದ್ರದಲ್ಲಿ ಆಯೋಜಿಸಿದ್ದ ೯ನೇ ಪೋಷಣ್ ಮಾಸಾಚರಣೆ ಕಾರ್ಯಕ್ರಮ "ನಮ್ಮ ಅಂಗನವಾಡಿ ನಮ್ಮ ಜವಾಬ್ದಾರಿ " ಧ್ಯೇಯ ವಾಕ್ಯದೊಂದಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಣ್ ಅಭಿಯಾನ ಕಾರ್ಯಕ್ರಮವು ದೇಶದ ಪ್ರಗತಿಗೆ ನಾಂದಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮಾಹಿತಿ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪ ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಒಂಬತ್ತನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಯನ್ನು ಪ್ರತಿವರ್ಷ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸೆಪ್ಟೆಂಬರ್-ಅಕ್ಟೋಬರ್ ೮ರವರೆಗೆ ದೇಶದಾದ್ಯಂತ ಆಚರಿಸಲಾಗುತ್ತಿದ್ದು ಇದರ ಮಹತ್ವ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.ಎಲ್.ಎ.ಡಿ.ಸಿ .ವಕೀಲರಾದ ಎಂ.ಸಿ. ನಟರಾಜು ಮಾತನಾಡಿ, ಸಾವಿರ ದಿನಗಳ ಗರ್ಭಿಣಿ ಆರೈಕೆ ಕುರಿತು ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೌಷ್ಟಿಕ ಆಹಾರ ''''''''''''''''ಎಲ್ಲರಿಗೂ ಎಲ್ಲಡೆಯೂ'''''''''''''''' ಸಿಗುವಂತಹ ಪೋಷಕಾಂಶಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಾಗೂ ಐಸಿಡಿಎಸ್ ಸೇವೆಗಳನ್ನು ಸಮರ್ಪಕವಾಗಿ ಒದಗಿಸುತ್ತಿರುವ ಕುರಿತು ಇಲಾಖೆಯನ್ನು ಶ್ಲಾಘಿಸಿದರು.
ಸಂರಕ್ಷಣಾಧಿಕಾರಿ ಕುಸುಮ, ನಗರವೃತ್ತದ ಹಿರಿಯ ಮೇಲ್ವಿಚಾರಕರು ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌರವ ಎಣ್ಣಿ, ಕಿರಿಯ ಮೇಲ್ವಿಚಾರಕಿ ಡಾ. ಸುಮಂಗಲ ಬದಾಮಿ. ಜಿ.ಎಂ.ಎಚ್.ಪಿ.ಎಸ್. ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.