ಕನ್ನಡಪ್ರಭ ವಾರ್ತೆ ಮಳವಳ್ಳಿ
ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶ ಅಗತ್ಯ. ಸೊಪ್ಪು, ತರಕಾರಿ ಜತೆ ಮೊಳಕೆ ಕಾಳುಗಳನ್ನು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ ತಿಳಿಸಿದರು.ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಕಂದೇಗಾಲ ವೃತ್ತದಿಂದ ಮಂಗಳವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಅಗತ್ಯವಾದ ಪೌಷ್ಟಿಕಾಂಶ ಒದಗಿಸುವ ಮೂಲಕ ಅವರ ಆರೋಗ್ಯವನ್ನು ಸುಧಾರಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ತಾಲೂಕಿನಲ್ಲಿ 10ರಿಂದ 12 ಬಾಲ್ಯವಿವಾಹ ಪ್ರಕರಣಗಳನ್ನು ಪತ್ತೆ ಹಚ್ಚಿ ದೂರು ದಾಖಲಿಸಲಾಗಿದೆ. ಇದು ಸಮಾಜಕ್ಕೆ ಅಂಟಿದ ಪಿಡುಗು. ಇಂಥ ವ್ಯವಸ್ಥೆಯನ್ನು ಬೇರು ಸಮೇತ ನಿರ್ಮೂಲನೆ ಮಾಡಲು ಪೋಷಕರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಪ್ಯಾನಲ್ ವಕೀಲೆ ರಾಣಿ ಮಾತನಾಡಿ, ಎಲ್ಲರೂ ಕಾನೂನಿನ ಅರಿವು ಪಡೆದುಕೊಳ್ಳಬೇಕು. ಸಮಾಜದಲ್ಲಿ ನ್ಯೂನತೆಗಳನ್ನು ಪರಿಹರಿಸುವಲ್ಲಿ ಎಲ್ಲರ ಪಾತ್ರ ಮಹತ್ವದಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರವು ನಿಮ್ಮ ನೆರವಿಗೆ ಬರಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಸರಳಾ, ಮುಖ್ಯಶಿಕ್ಷಕಿ ಉಷಾ, ಗ್ರಾಪಂ ನೌಕರ ಮಹದೇವು, ಅಂಗನವಾಡಿ ಕಾರ್ಯಕರ್ತೆಯರಾದ ನಾಗಮ್ಮ, ಜ್ಯೋತಿ, ಲತಾಮ್ಮ, ಅನಿತಾ, ಜ್ಯೋತಿ ಹಾಗೂ ಕಂದೇಗಾಲ ವೃತ್ತದ ಕಾರ್ಯಕರ್ತೆಯರು ಭಾಗವಹಿಸಿದ್ದರು.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಸವರೆಡ್ಡಪ್ಪ ರೋಣದ ಚಾಲನೆ
ಕನ್ನಡಪ್ರಭ ವಾರ್ತೆ ಪಾಂಡವಪುರತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಅಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಟ್ಟಣದ ಕೃಷ್ಣನಗರ ಬಡವಣೆಯಲ್ಲಿ ತಹಸೀಲ್ದಾರ್ ಬಸವರೆಡ್ಡಪ್ಪರೋಣದ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿದೆ. ಸರ್ಕಾರ ರಾಜ್ಯದ ಎಲ್ಲಾ ಜಾತಿಯು ಶೈಕ್ಷೆಣಿಕ ಮತ್ತು ಸಾಮಾಜಿಕ ಎಷ್ಟು ಹಿಂದೆ ಇದೆ ಎಂಬುದನ್ನು ತಿಳಿದುಕೊಳಲು ಸಮೀಕ್ಷೆ ನಡೆಸುತ್ತಿದೆ. ಶಿಕ್ಷಕರು ಬಂದಾಗ ಸರಿಯಾದ ಮಾಹಿತಿ ನಮೂದಿಸುವಂತೆ ಸಲಹೆ ನೀಡಿದರು.ಈ ವೇಳೆ ಬಿ.ಇ.ಒ.ಧರ್ಮಶೆಟ್ಟಿ, ಹಿಂದುಳಿದ ವರ್ಗಗಳ ಅಧಿಕಾರಿ ನಂದಕುಮಾರ್, ವಿಸ್ತರಣಾಧಿಕಾರಿ ನಿಂಗೇಗೌಡ, ನಿಲಯಪಾಲಕರಾದ ಚಂದ್ರಕಲಾ, ಕುಮಾರ್, ನಾಗರತ್ನಮ್ಮ, ಎಚ್.ಕೆ.ತೇಜಸ್ವಿ, ಪ್ರಥಮ ದರ್ಜೆ ಸಹಾಯಕ ದಿನೇಶ್, ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಹಾಜರಿದರು.