ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.28ರಂದು ನಗರ ಕೇಂದ್ರ ಗ್ರಂಥಾಲಯ ಡಿಸಿ ಕಾಂಪೌಂಡ್‌ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜೂ.28ರಂದು ನಗರ ಕೇಂದ್ರ ಗ್ರಂಥಾಲಯ ಡಿಸಿ ಕಾಂಪೌಂಡ್‌ನಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಲ್‌ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಹಾಗೂ ಬೆಂಗಳೂರಿನ ಟಾಟಾ ಕನ್ಸಲ್ಟನ್ಸ್‌ನ ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗಪ್ಪ ಬಕ್ಕಣ್ಣವರ ಆಗಮಿಸಲಿದ್ದಾರೆ. ಸಭೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಕಿರಣ ಸವಣೂರ ಹಾಗೂ ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ಡಾ.ರಾಮಯ್ಯ ಉಪಸ್ಥಿತರಿರುವರು. ಪದಗ್ರಹಣ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸುವ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ ವಹಿಸಲಿದ್ದಾರೆ. ಪದಗ್ರಹಣ ಸಮಾರಂಭದ ನಂತರ ಗ್ರಂಥಾಲಯದ ಅಭಿವೃದ್ಧಿ, ಉದ್ಯೋಗಾವಕಾಶಗಳು, ಸವಾಲುಗಳು ಹೀಗೆ ಮುಂತಾದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಪಾಲಕರು ಭಾಗವಹಿಸಬೇಕು ಎಂದು ಸಂಘಟಕರು ಕೋರಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.