೧೮ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ

KannadaprabhaNewsNetwork |  
Published : Nov 14, 2025, 01:30 AM IST
02 | Kannada Prabha

ಸಾರಾಂಶ

ದೇವನಹಳ್ಳಿ: ೧೮ನೇ ಶತಮಾನದ ದಿಟ್ಟ ಮಹಿಳಾ ಹೋರಾಟಗಾರ್ತಿ ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ: ೧೮ನೇ ಶತಮಾನದ ದಿಟ್ಟ ಮಹಿಳಾ ಹೋರಾಟಗಾರ್ತಿ ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಛಲವಾದಿ ಸಮಾಜದಿಂದ ಹಮ್ಮಿಕೊಳ್ಳಲಾಗಿದ್ದ ಒನಕೆ ಓಬವ್ವ ಜಯಂತಿಯನ್ನು ವೀರ ವನಿತೆ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ದಿನ ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ದಿನವಾಗಿದೆ. ೧೮ನೇ ಶತಮಾನದಲ್ಲಿ ಚಿತ್ರದುರ್ಗದ ಪಾಳೆಗಾರ ಮದಕರಿ ನಾಯಕನ ಅರಮನೆಯ ಕಾವಲುಗಾರನ ಪತ್ನಿ ಓಬವ್ವ. ನೂರಾರು ಶತ್ರು ಸೈನಿಕರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ವೀರ ಮರಣವನ್ನಪ್ಪಿದ ಓಬವ್ವ ಅವರು ಎಲ್ಲಾ ಮಹಿಳೆಯರಿಗೆ ಇವರು ಸ್ಫೂರ್ತಿಯಾಗಿದ್ದಾರೆ ಎಂದರು. ತಾಯಿ ಚಾಮುಂಡಿ ತಾಯಿಯ ರೂಪ ತಾಳಿ ಒನಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ನೂರಾರು ಸೈನಿಕರನ್ನು ಬಡಿದ ಶಕ್ತಿಶಾಲಿ ಮಹಿಳೆ ಓಬವ್ವ. ಹಾಗಾಗಿ ಒನಕೆ ಓಬವ್ವ ಅವರ ರೀತಿಯಲ್ಲಿ ಇನ್ನೂ ಅನೇಕ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದನ್ನು ದೇಶದಾದ್ಯಂತ ತಿಳಿಸುವ ಪ್ರಯತ್ನ ಮಾಡಬೇಕು ಎಂದರು.

ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಯಾವ ರೀತಿ ಸಮಾಜದಲ್ಲಿ ಎಲ್ಲರೂ ಸಮನಾಗಿ ಬದುಕಲು, ಅದರಲ್ಲೂ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ಭಾಗವಹಿಸಲು ಸಂವಿಧಾನದಲ್ಲಿ ದಾರಿಮಾಡಿ ಕೊಟ್ಟರು, ಇಂತಹ ಮಹಾನ್ ವ್ಯಕ್ತಿಯನ್ನು ಸದಾ ನೆನೆಯುತ್ತಾ ಮುಂದೆ ಸಾಗೋಣ ಎಂದು ತಿಳಿಸಿದರು.

ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರು ಕೆಲವು ಸಮಸ್ಯೆಗಳ ಅಹವಾಲುಗಳನ್ನು ಸಚಿವರಿಗೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಸಮಸ್ಯೆಯನ್ನು ಆದಷ್ಟೂ ಬೇಗ ಪರಿಹರಿಸಲು ಸೂಚಿಸುತ್ತೇನೆ. ಹಾಗೇ ಇದುವರೆಗೆ ವಿದ್ಯುತ್ ಬಿಲ್ ಸುಮಾರು ೧೧ ಲಕ್ಷವಾಗಿದ್ದು, ಅದನ್ನು ವಜಾ ಮಾಡಲು ಸಂಬಂಧಪಟ್ಟ ಸಚಿವರಿಗೆ ತಿಳಿಸಿದ್ದೇನೆ. ಇನ್ನೂ ಒಂದು ತಿಂಗಳೊಳಗೆ ಜನರೇಟರ್ ನನ್ನ ಅನುದಾನದಲ್ಲಿ ಬರುತ್ತದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಬಿ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಎಡಿಸಿ ಸಯಿದಾ ಆಯಿಷ ತಾಲೂಕು ಗ್ಯಾರಂಟಿ ಅಧ್ಯಕ್ಷರು ಸಿ ಜಗನ್ನಾಥ್, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನುಕೃಷ್ಣ, ಉಪಾಧ್ಯಕ್ಷ ಜಿ.ಎ ರವೀಂದ್ರ, ತಹಶೀಲ್ದಾರ್ ಅನಿಲ್ ಎಂ, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ಮುನಿರಾಜು, ಕೆವಿ ಸ್ವಾಮಿ, ಸಹಾಯಕ ಪ್ರಾಧ್ಯಾಪಕ ಹಾಗೂ ಅಂಬೇಡ್ಕರ್ ವಾದಿ ಯುವ ಚಿಂತಕ ಸುರೇಶ್ ಗೌತಮ್, ಕಾರಹಳ್ಳಿ ಶ್ರೀನಿವಾಸ್, ಚೌಡಪನಹಳ್ಳಿ ಲೋಕೇಶ್, ಅತ್ತಿಬೆಲೆ ನರಸಪ್ಪ, ದಾಸರಬೀದಿ ಮುರಳಿ ಸೇರಿದಂತೆ ಸಮುದಾಯದ ಮುಖಂಡರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

೧೩ ದೇವನಹಳ್ಳಿ ಚಿತ್ರಸುದ್ದಿ:

ಅಂಬೇಡ್ಕರ್ ಭವನದಲ್ಲಿ ನಡೆದ ಒನಕೆ ಓಬವ್ವ ಜಯಂತಿಯನ್ನು ಸಚಿವ ಕೆಎಚ್. ಮುನಿಯಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ