ಹೆಚ್ಚಿನ ಬೆಲೆಗೆ ಬೀಜ, ಗೊಬ್ಬರ ಮಾರಾಟಕ್ಕೆ ಆಕ್ಷೇಪ

KannadaprabhaNewsNetwork |  
Published : Jun 19, 2025, 11:50 PM IST
(19ಎನ್.ಆರ್.ಡಿ1 ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಮುಖಂಡ ಎಸ್.ಬಿ.ಜೋಗಣ್ಣವರ ಮಾತನಾಡುತ್ತಿದ್ದಾರೆ.)   | Kannada Prabha

ಸಾರಾಂಶ

ಬೀಜ, ಗೊಬ್ಬರ, ಮಾರಾಟ ಮಾಡುವ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.

ನರಗುಂದ: ಬೀಜ, ಗೊಬ್ಬರ, ಮಾರಾಟ ಮಾಡುವ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.

ಅವರು 3623ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ತಾಲೂಕಿನ ರೈತರು ಸದ್ಯ ಮುಂಗಾರು ಹಂಗಾಮಿನ ಮೃಗಶಿರಾ ಮಳೆ ಉತ್ತಮವಾಗಿದ್ದರಿಂದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳ, ಬಿ.ಟಿ. ಹತ್ತಿ, ಈರುಳ್ಳಿ, ಮೆಣಸಿನಕಾಯಿ ಬೀಜ ಬಿತ್ತನೆ ಮಾಡುತ್ತಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧ ಖಾಸಗಿ ಬೀಜ, ಗೊಬ್ಬರ ಮಾರಾಟ ಮಾಡುವ ಅಂಗಡಿಗಳ ವ್ಯಾಪಾರಸ್ಥರು ಒಂದೇ ಕಂಪನಿಯ ಬೀಜ ಮತ್ತು ಗೊಬ್ಬರವನ್ನು ಒಂದೊಂದು ಅಂಗಡಿಗಳಲ್ಲಿ ಒಂದೊಂದು ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ರೈತರು ಆ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ವ್ಯಾಪಾರಸ್ಥರನ್ನು ಕೇಳಿದರೆ ನಮ್ಮ ಅಂಗಡಿಯಲ್ಲಿ ಈ ರೀತಿ ಬೆಲೆಯಿದೆ. ನಿಮಗೆ ಬೇಕಾದರೆ ಖರೀದಿ ಮಾಡಿ ಇಲ್ಲವಾದರೆ ಬಿಡಿ ಎಂದು ಹೇಳುತ್ತಾರೆ. ಆದ್ದರಿಂದ ಈ ಹಿಂದೆ ನಾವು ಈ ತಾಲೂಕಿನಲ್ಲಿ ಖಾಸಗಿ ಅಂಗಡಿಯವರು ಹೆಚ್ಚಿನ ಬೆಲೆಗೆ ಬೀಜ, ಗೊಬ್ಬರ ಮಾರಾಟ ಮಾಡುವರು, ಈ ಬಗ್ಗೆ ಕೃಷಿ ಅಧಿಕಾರಿಗಳು ವ್ಯಾಪಾರಸ್ಥರನ್ನು ವಿಚಾರಣೆ ಮಾಡಬೇಕೆಂದು ತಿಳಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈಗಲಗ ಕಾಲ ಮಿಂಚಿಲ್ಲ, ಜಿಲ್ಲಾ ಕೃಷಿ ಜಾಗೃತ ದಳದ ಮತ್ತು ಕೃಷಿ ಅಧಿಕಾರಿಗಳು ಈ ರೀತಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಅಂಗಡಿ ವ್ಯಾಪಾರಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕೃಷಿ ಇಲಾಖೆ ಮುಂದೆ ತಾಲೂಕಿನ ರೈತರು ಉಗ್ರ ಹೋರಾಟ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವೀರಭಸಪ್ಪ ಹೂಗಾರ, ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಸಿ.ಎಸ್. ಪಾಟೀಲ, ಹನಮಂತ ಸರನಾಯ್ಕರ, ಶಂಕ್ರಪ್ಪ ಜಾಧವ, ಅರ್ಜುನ ಮಾನೆ, ಶಿವಪ್ಪ ಸಾತಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಶಿವಪ್ಪ ಸಾತಣ್ಣವರ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವಾಣ, ವಿಜಯಕುಮಾರ ಹೂಗಾರ, ಸೇರಿದಂತೆ ಮುಂತಾದವರು ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ