ಸಂವಿಧಾನ ಪಾಲನೆ ಡಾ. ಅಂಬೇಡ್ಕರ್‌ ಅವರಿಗೆ ನೀಡುವ ಗೌರವ: ಪ್ರೊ. ಪ್ರಶಾಂತ ನೀಲಾವರ

KannadaprabhaNewsNetwork |  
Published : Apr 16, 2025, 12:34 AM IST
15ಪ್ರಶಾಂತ | Kannada Prabha

ಸಾರಾಂಶ

ನಗರದ ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯ ಸಭಾಭವನದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಅರಿವು ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಂವಿಧಾನದ ಮೌಲ್ಯಗಳನ್ನು ಸರಿಯಾಗಿ ಅರಿತು ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ನೀಡುವ ನಿಜವಾದ ಗೌರವ. ಈ ದೃಷ್ಟಿಯಿಂದ ಸಂವಿಧಾನ ಅರಿವು ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕು ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನೀಲಾವರ ಹೇಳಿದ್ದಾರೆ.

ಸೋಮವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಸಂಸ್ಥೆಯ ಸಭಾಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಪೂರ್ಣಪ್ರಜ್ಞ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ಅಂಬೇಡ್ಕರ್ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ ಎಂದರು.

ಜಿಲ್ಲಾ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಜಿ. ಶಂಕರ್ ಸ.ಮ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ ಪ್ರಸಾದ್, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ. ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಡಾ. ರಘು ನಾಯ್ಕ್ ಹಾಗೂ ನಾಗರಾಜ ಜಿ.ಪಿ, ರೆಡ್‌ಕ್ರಾಸ್ ಸಂಯೋಜಕ ಡಾ. ರಂಗಸ್ವಾಮಿ ಮತ್ತಿತರರು ಇದ್ದರು.

ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ನಿರೂಪಿಸಿ, ರೆಡ್‌ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ