ಕನ್ನಡಪ್ರಭ ವಾರ್ತೆ ಆಳಂದ
ಪಟ್ಟಣದ ತಾಲೂಕು ಆಡಳಿತ ವತಿಯಿಂದ ಭಾನುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಣಮಂತ ಶೇರಿ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ, ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ. ಯಲ್ಲಪ್ಪ ಇಂಗಳೆ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಅಣ್ಣಾರಾವ್ ಪಾಟೀಲ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಮತ್ತು ಅಪಾರ ಸಾಹಿತ್ಯಿಕ ಶ್ರೇಷ್ಠತೆ ಇದೆ. ಹಿಂದಿ ಭಾಷೆ ಅಂಬೆಗಾಲಿಡುತ್ತಿದ್ದ ಹಾಗೂ ಇಂಗ್ಲಿಷ್ ಭಾಷೆ ತೊಟ್ಟಿಲಲ್ಲಿದ್ದ ಕಾಲದಲ್ಲೇ ಕನ್ನಡ ಸಮೃದ್ಧವಾಗಿ ಬೆಳೆದು ನಿಂತಿತ್ತು. ಕನ್ನಡಕ್ಕೆ ದೊರೆತಿರುವ ಜ್ಞಾನಪೀಠ ಪ್ರಶಸ್ತಿಗಳು ಹಾಗೂ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಅದರ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ ಎಂದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಾಷ್ಟ್ರಧ್ವಜಾರೋಹಣವನ್ನು ತಹಸೀಲ್ದಾರ್ ಅಣ್ಣಾರಾವ್ ಪಾಟೀಲ ನೆರವೇರಿಸಿದರು.
ಅಧಿಕಾರಿಗಳ ಗೈರಿಗೆ ಆಕ್ರೋಶ: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಶಾಸಕರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಕ್ಕೆ ಕನ್ನಡ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಕರವೇ ಜಿಲ್ಲಾ ಸಂಘಟಕ ವೆಂಕಟೇಶ ರಾಠೋಡ ಹಾಗೂ ಮುಖಂಡ ಮಹಾಂತೇಶ ಸಣ್ಣಮನಿ ಮಾತನಾಡಿ, ನಾಡು-ನುಡಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಮಹತ್ವದ ಕಾರ್ಯಕ್ರಮಕ್ಕೆ ಅಧಿಕಾರಿಗಳು ಗೈರಾಗಿರುವುದು ಕನ್ನಡದ ಬಗ್ಗೆ ಅವರ ನಿರ್ಲಕ್ಷ್ಯತೋರಿಸುತ್ತದೆ. ಗೈರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾರಂಭದಲ್ಲೇ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದರು. ತಹಸೀಲ್ದಾರ್ ಅಣ್ಣಾರಾವ್ ಪಾಟೀಲ ಪ್ರತಿಕ್ರಿಯಿಸಿ, ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳಿಗೆ ಮುಂಚಿತವಾಗಿಯೇ ಸೂಚನೆ ನೀಡಲಾಗಿತ್ತು. ಗೈರಾದವರಿಂದ ಕಾರಣ ಕೇಳಿ ನೋಟಿಸ್ ನೀಡಲಾಗುವುದು. ಕನ್ನಡದ ಕಾರ್ಯಕ್ರಮಗಳಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.