30X40 ಒಳಗಿರುವ ಮನೆಗಳಿಗೆ ಓಸಿ ವಿನಾಯಿತಿ

KannadaprabhaNewsNetwork |  
Published : Oct 17, 2025, 01:00 AM IST
ಮನೆ | Kannada Prabha

ಸಾರಾಂಶ

ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ  

 ಬೆಂಗಳೂರು :  ರಾಜ್ಯದ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸಚಿವ ಸಂಪುಟ ನಿರ್ಧಾರ ಮಾಡಿದೆ.

ಇತ್ತೀಚೆಗಷ್ಟೇ ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ (ಜಿಬಿಎ) 1,200 ಚದರಡಿ ವಿಸ್ತೀರ್ಣದವರೆಗೆ ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್‌ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಿ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಜಿಬಿಎ ಮಾದರಿಯಲ್ಲಿ ನಕ್ಷೆ ಮಂಜೂರಾತಿ ಪಡೆಯದ ಕಟ್ಟಡಗಳಿಗೂ ವಿನಾಯಿತಿ ನೀಡುವಂತೆ ಚರ್ಚಿಸಲಾಯಿತು. ಆದರೆ, ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಈ ಕುರಿತು ನಿರ್ಣಯ ಬೇಡ. ಅನುಷ್ಠಾನದ ವೇಳೆ ಅಥವಾ ಸರ್ಕಾರಿ ಆದೇಶದ ವೇಳೆ ನಕ್ಷೆ ಮಂಜೂರಾತಿ ಪಡೆಯದ ನಿರ್ದಿಷ್ಟ ಕಟ್ಟಡಗಳಿಗೂ ವಿನಾಯಿತಿ ನೀಡಲು ಕ್ರಮ ಕೈಗೊಳ್ಳಬಹುದು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.

ಹೀಗಾಗಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು ಎರಡಂತಸ್ತು, ಸ್ಟಿಲ್ಟ್ ಮತ್ತು ಮೂರಂತಸ್ತಿನ ವಸತಿ ಕಟ್ಟಡಗಳಿಗೆ ಮಾತ್ರ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಲು ಸಂಪುಟ ನಿರ್ಧಾರ ಮಾಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌