ನೆಲ, 3 ಅಂತಸ್ತಿನ ಕಟ್ಟಡಗಳಿಗೆಒಸಿ ಅಗತ್ಯವಿಲ್ಲ: ರಾಜ್ಯ ಸರ್ಕಾರ

KannadaprabhaNewsNetwork |  
Published : Jun 08, 2026, 03:15 AM IST
ಕಟ್ಟಡ | Kannada Prabha

ಸಾರಾಂಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 2,400 ಚದರ ಅಡಿ ವಿಸ್ತೀರ್ಣದವರೆಗಿನ ( ಶೇ.20ರಷ್ಟು ವ್ಯತ್ಯಾಸದ ಮಿತಿ) ನಿವೇಶನಗಳಲ್ಲಿ ನಿರ್ಮಿಸಿರುವ ನೆಲ 3 ಅಂತಸ್ತು ಅಥವಾ ಸ್ಟಿಲ್ಟ್ ಪಾರ್ಕಿಂಗ್ 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 2,400 ಚದರ ಅಡಿ ವಿಸ್ತೀರ್ಣದವರೆಗಿನ (+ಶೇ.20ರಷ್ಟು ವ್ಯತ್ಯಾಸದ ಮಿತಿ) ನಿವೇಶನಗಳಲ್ಲಿ ನಿರ್ಮಿಸಿರುವ ನೆಲ+3 ಅಂತಸ್ತು ಅಥವಾ ಸ್ಟಿಲ್ಟ್ ಪಾರ್ಕಿಂಗ್ +4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಟ್ಟಡ ನಿರ್ಮಿಸಿದವರಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಇಲ್ಲದೇ ಅಧಿಕೃತ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ವಸತಿ ಕಟ್ಟಡಗಳ ನಿರ್ಮಾಣ ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ 2026ರ ಮೇ 31ರ ಒಳಗೆ ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಬಾರಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಖಚಿತಪಡಿಸಿಕೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳು ಸ್ಥಳ ಪರಿಶೀಲನೆ ನಡೆಸಿ ಕಟ್ಟಡದ ಭಾವಚಿತ್ರ ತೆಗೆದುಕೊಂಡು ವಿದ್ಯುತ್ ಸಂಪರ್ಕ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಗರದಲ್ಲಿ ರಿಯಲ್ ಎಸ್ಟೇಟ್ ದುಬಾರಿಯಾಗಿದೆ. ವಸತಿ ಕಟ್ಟಡಗಳಿಗೆ ಬೇಡಿಕೆ ಹೆಚ್ಚಳವಾಗಿರುವುದರಿಂದ ಕಡಿಮೆ ಜಾಗದಲ್ಲಿ ಹೆಚ್ಚು ಮಹಡಿಗಳನ್ನು ನಿರ್ಮಿಸುತ್ತಿರುವುದರಿಂದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಸಿರು ರಕ್ಷಣೆಗೆ ಸಂಘ- ಸಂಸ್ಥೆಗಳು ಮುಂದಾಗಲಿ: ವಕೀಲ ಬಿ.ಎಸ್. ಬಾಳೇಶ್ವರಮಠ
ಮೃತ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ:ವಾಪಸ್ ಪಡೆದು ಅರ್ಹರಿಗೆ ತಲುಪಿಸಲು ಕ್ರಮ: ಎಸ್.ಆರ್. ಪಾಟೀಲ