ಮಹಿಳೆಯರಿಗೆ ಕರಕುಶಲ ತರಬೇತಿ ಕೊಡಿಸಲು ಮುಂದಾಗಿ

KannadaprabhaNewsNetwork |  
Published : Sep 20, 2024, 01:36 AM IST
 | Kannada Prabha

ಸಾರಾಂಶ

ಮಹಿಳೆಯರಿಗೆ ಕರಕುಶಲ ತರಬೇತಿಯನ್ನು ಕೊಡಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಚಂದ್ರಶೇಖರ್ ಎಚ್.ಪಾಟೀಲ್ ಸಲಹೆ ನೀಡಿದರು.

ಚಾಮರಾಜನಗರ: ಮಹಿಳೆಯರಿಗೆ ಕರಕುಶಲ ತರಬೇತಿಯನ್ನು ಕೊಡಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಚಂದ್ರಶೇಖರ್ ಎಚ್.ಪಾಟೀಲ್ ಸಲಹೆ ನೀಡಿದರು.

ನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಸ್ನೇಹ ಜ್ಯೋತಿ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಕಚೇರಿಯಲ್ಲಿ ನಡೆದ ೨೦೨೩- ೨೪ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಮುಂಬರುವ ಆರ್ಥಿಕ ವರ್ಷಗಳಲ್ಲಿ ಸಂಘದ ವತಿಯಿಂದ ಅಧಿಕವಾಗಿ ಶೇರು ಸಂಗ್ರಹಣೆ ಮಾಡುವುದರ ಜೊತೆಗೆ ೨೪೦ಕ್ಕೂ ಹೆಚ್ಚು ಹೊಸ ಮಹಿಳಾ ಸ್ವ ಸಹಾಯ ಸಂಘವನ್ನು ರಚನೆ ಮಾಡಬೇಕು. ಈ ಮೂಲಕ ಮಹಿಳೆಯರಲ್ಲಿ ಉಳಿತಾಯ ಮಾಡುವ ಹವ್ಯಾಸ ಹೆಚ್ಚಿಸಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಅಲ್ಲದೇ ಸಹಕಾರಿ ತತ್ವದಡಿಯಲ್ಲಿ ಎಲ್ಲಾ ತಾಲೂಕುಗಳಲ್ಲಿ ವಿವಿಧ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಶೇರುದಾರರು, ಮಹಿಳೆಯರು ಹಾಗೂ ಅವರ ಮಕ್ಕಳಿಗೆ ಹೊಲಿಗೆ, ಕಂಪ್ಯೂಟರ್ ಸೇರಿದಂತೆ ಹಲವು ಕುಶಲ ತರಬೇತಿಗಳನ್ನು ಕೊಡಿಸಬೇಕು ಎಂದರು.ಸಂಘದ ಅಧ್ಯಕ್ಷೆ ನಾಗರತ್ನಮ್ಮ ಮಾತನಾಡಿ, ಮಹಿಳೆಯರು ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಇದೇ ವೇಳೆ ಸಂಘದ ವಾರ್ಷಿಕ ವರದಿ ಮಂಡಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ನಿಂಗರಾಜಮ್ಮ, ಸಿಮ್ಸ್‌ನ ಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕ ಆಶಾ ಸೇರಿದಂತೆ ಸಂಘದ ನಿರ್ದೇಶಕರು, ಸದಸ್ಯರು ಮತ್ತು ಶೇರುದಾರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ