ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ಮುಷ್ಠಿ ಕಾಣಿಕೆ

KannadaprabhaNewsNetwork |  
Published : Feb 03, 2026, 02:45 AM IST
 ಪುತ್ತಿಗೆ ಮಠದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪುತ್ತಿಗೆ ಶ್ರೀಗಳು ಮುಷ್ಠಿ ಕಾಣಿಕೆ ಸಲ್ಲಿಸಿದರು | Kannada Prabha

ಸಾರಾಂಶ

ಇಲ್ಲಿಯ ಹಿರಿಯಡಕದಲ್ಲಿರುವ ಪುತ್ತಿಗೆ ಮಠದ ಆಡಳಿತದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಮುಷ್ಠಿ ಕಾಣಿಕೆ ಕಾರ್‍ಯಕ್ರಮ ಸೋಮವಾರ ನೆರವೇರಿತು.

ಉಡುಪಿ: ಇಲ್ಲಿಯ ಹಿರಿಯಡಕದಲ್ಲಿರುವ ಪುತ್ತಿಗೆ ಮಠದ ಆಡಳಿತದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಮುಷ್ಠಿ ಕಾಣಿಕೆ ಕಾರ್‍ಯಕ್ರಮ ಸೋಮವಾರ ನೆರವೇರಿತು.

ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭ ಸ್ವಾಗತ ಕೋರಲಾಯಿತು.

ಈ ಕಾರ್‍ಯಕ್ರಮಕ್ಕೆ ಮೊದಲು ಸಾಮೂಹಿಕ ಪ್ರಾರ್ಥನೆ, ಗಣಹೋಮ ಮಾಡಲಾಯಿತು. ನಂತರ ಪುತ್ತಿಗೆ ಮಠದ ಉಭಯ ಶ್ರೀಪಾದರು ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಅಧಿಕ ಸಂಖ್ಯೆಯಲ್ಲಿ ಭಕ್ತರು ಮುಷ್ಠಿ ಕಾಣಿಕೆ ಸಮರ್ಪಿಸಿದರು.

ಇದೇ ಸಂದರ್ಭ ಸ್ಥಳೀಯ ಭಕ್ತ ವೃಂದದಿಂದ ಚತುರ್ಥ ಪರ್ಯಾಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭದಲ್ಲಿ ಗೌರವ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ