ಲೋಕಾ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಕಿರಿಯ ಎಂಜಿನಿಯರ್

KannadaprabhaNewsNetwork |  
Published : Oct 19, 2023, 12:45 AM IST
ರೊನಾಲ್ಡ್‌ ಲೋಬೋ | Kannada Prabha

ಸಾರಾಂಶ

ಲಂಚಕ್ಕೆ ಬೇಡಿಕೆ: ಲೋಕೋಪಯೋಗಿ ಕಿರಿಯ ಅಭಿಯಂತರ ಲೋಕಾಯುಕ್ತ ಬಲೆಗೆ

ಕನ್ನಡಪ್ರಭ ವಾರ್ತೆ ಮಂಗಳೂರು ನಗರದ ಬೋಂದೆಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್‌ ಲಂಚ ಸ್ವೀಕರಿಸುತ್ತಿದ್ದಾಗ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಿರಿಯ ಎಂಜಿನಿಯರ್‌ ರೊನಾಲ್ಡ್ ಲೋಬೋ ಎಂಬವರೇ ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಕೈಯೊಡ್ಡುವಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿವರು. ಲೋಕೋಪಯೋಗಿ ಇಲಾಖೆಯ ಕ್ಲಾಸ್ 2 ದರ್ಜೆಯ ಗುತ್ತಿಗೆದಾರ ಪ್ರಭಾಕರ ನಾಯ್ಕ ಎಂಬವರು ಬೆಳ್ತಂಗಡಿ ತಾಲೂಕಿನ ಎರಡು ಗ್ರಾಮಗಳಲ್ಲಿ 45 ಲಕ್ಷ ರು. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲನಿ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದರು. ಈ ಬಗ್ಗೆ ವರದಿ ಮಾಡಲು ಲೋಕೋಪಯೋಗಿ ಇಲಾಖೆಗೆ ಅರ್ಜಿ ಸಲ್ಲಿಸಿದಾಗ ಇಲಾಖೆಯ ಗುಣಮಟ್ಟ ಮತ್ತು ಭರವಸೆ ವಿಭಾಗದ ಎಂಜಿನಿಯರ್ ರೊನಾಲ್ಡ್ ಲೋಬೋ 20 ಸಾವಿರ ರು. ಲಂಚ ಕೇಳಿದ್ದರು ಎನ್ನಲಾಗಿದೆ. ಆದರೆ ಲಂಚ ಕೊಡಲು ನಿರಾಕರಿಸಿದ ಪ್ರಭಾಕರ ನಾಯ್ಕ ಅವರು ನೇರವಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಂತೆ ಬುಧವಾರ ಲಂಚದ ಹಣ ಸ್ವೀಕರಿಸುವ ವೇಳೆ ದಾಳಿ ನಡೆಸಿ ರೊನಾಲ್ಡ್ ಲೋಬೋನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.

PREV

Recommended Stories

ಕಾಂಗ್ರೆಸ್ ಸರ್ಕಾರದಿಂದ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ