ಟೆಂಡರ್ ಕಾಮಗಾರಿಗಳನ್ನು ನಿಯಮಾನುಸಾರ ಎಸ್ಸಿ, ಎಸ್ಟಿಗೆ ನೀಡಿ

KannadaprabhaNewsNetwork |  
Published : Jun 17, 2026, 01:15 AM IST
11 | Kannada Prabha

ಸಾರಾಂಶ

ತಾಯಿ ಮತ್ತು ಮಕ್ಕಳ ಮರಣ ಪ್ರಕರಣಗಳಲ್ಲಿ ಎಸ್ಸಿ, ಎಸ್ಟಿಯವರು ಎಷ್ಟು ಜನ ಇದ್ದರೆ ಎಂಬುದರ ಬಗ್ಗೆ ಆಯೋಗಕ್ಕೆ ವರದಿ ಕಳುಹಿಸಿಕೊಡುವಂತೆ

ಕನ್ನಡಪ್ರಭ ವಾರ್ತೆ ಮೈಸೂರು

ವಿವಿಧ ಎಂಜಿನಿಯರಿಂಗ್ ಇಲಾಖೆಗಳ ಮೂಲಕ ನೀಡಲಾಗುವ ಟೆಂಡರ್ ಕಾಮಗಾರಿಗಳು ನಿಯಮಾನುಸಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೀಡುತ್ತಿರುವ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಎಲ್. ಮೂರ್ತಿ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಯಿ ಮತ್ತು ಮಕ್ಕಳ ಮರಣ ಪ್ರಕರಣಗಳು ಹೆಚ್ಚಾಗಿ ಕೂಲಿ‌ಕಾರ್ಮಿಕರ ವರ್ಗದಲ್ಲಿ ಹೆಚ್ಚಿರುತ್ತದೆ. ತಾಯಿ ಮತ್ತು ಮಕ್ಕಳ ಮರಣ ಪ್ರಕರಣಗಳಲ್ಲಿ ಎಸ್ಸಿ, ಎಸ್ಟಿಯವರು ಎಷ್ಟು ಜನ ಇದ್ದರೆ ಎಂಬುದರ ಬಗ್ಗೆ ಆಯೋಗಕ್ಕೆ ವರದಿ ಕಳುಹಿಸಿಕೊಡುವಂತೆ ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕರದ ರೂಪದಲ್ಲಿ ಸಂಗ್ರಹಿಸುವ ಹಣದಲ್ಲಿ ಎಸ್.ಸಿ.ಪಿ/ ಟಿ.ಎಸ್.ಪಿ ಅನುದಾನದಲ್ಲಿ ಸಾಮಾನ್ಯವಾಗಿ ನೀಡಲಾಗುವ ಹಾಸ್ಟಲ್ ಗಳಿಗೆ ಹಾಸಿಗೆ ಆರ್.ಓ ಪ್ಲಾಂಟ್ ಇನ್ನಿತರೆ ವಸ್ತುಗಳ ಬದಲು ಹೊಸ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಪರಿಕರಗಳನ್ನು ನೀಡಲು ಯೋಜನೆ ರೂಪಿಸಿ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಿ, ಇದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಸಿವಿಲ್ ಕಾಮಗಾರಿಗಳನ್ನು ಇ- ಪೋರ್ಟಲ್ ಮುಖಾಂತರ ನೀಡಲಾಗುತ್ತಿದ್ದು, ಇದರಲ್ಲಿ ಕಾಮಗಾರಿಗಳನ್ನು ಎಸ್ಸಿ, ಎಸ್ಟಿಯವರಿಗೆ ಮೀಸಲಿಡಲಾಗಿದೆ ಎಂದರು.

ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ದಿವಾಕ‌ರ್, ಗೀತಾ ತಾಮೋಷಿ, ಎಂ. ಕುಂಬ್ಯಯ, ಕಾರ್ಯದರ್ಶಿ ಎಚ್.ಎನ್. ಶಿವರಾಮ್‌, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ
ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ