ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು : ಎಡಿಸಿ

KannadaprabhaNewsNetwork | Published : Jul 23, 2024 12:34 AM

ಸಾರಾಂಶ

ಚಿಕ್ಕಮಗಳೂರು, ಕೃಷಿ ಗಣತಿ ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕೃಷಿ ಗಣತಿ ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 11ನೇ ಕೃಷಿ ಗಣತಿ ಹಾಗೂ ಕೃಷಿ ಅಂಕಿ ಅಂಶಗಳು ಮತ್ತು ಜಿಲ್ಲಾ ಮಟ್ಟದ ಜನನ ಮರಣ ನಾಗರಿಕ ನೋಂದಣಿ ಪದ್ಧತಿ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮಿತಿಗಳಿದ್ದು, ಆಯಾಯ ತಾಲೂಕುಗಳ ಸಮಸ್ಯೆಗಳನ್ನು ಚರ್ಚಿಸಿ ವರದಿಯನ್ನು ಜಿಲ್ಲಾ ಸಮಿತಿಗೆ ಸಲ್ಲಿಸಬೇಕು. 2023- 24 ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಮುಂಗಾರು ಕಾಲಕ್ಕೆ ಜಿಲ್ಲೆಗೆ ಒಟ್ಟು 2134, ಹಿಂಗಾರು ಕಾಲಕ್ಕೆ 758 ಮತ್ತು ಬೇಸಿಗೆಯಲ್ಲಿ 50 ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳ ಲಾಗಿದೆ. ಸಕಾಲಿಕ ವರದಿ ಯೋಜನೆಯಡಿ 221 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡಿದ್ದು, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ವರದಿಯನ್ನು ಬೆಳೆ ಸಮೀಕ್ಷೆ ವರದಿಯಲ್ಲಿ ಬೆಳೆ ವಿವರಗಳನ್ನು ಸಂಬಂಧಪಟ್ಟ ಇಲಾಖೆಗಳು ದಾಖಲಿಸುತ್ತವೆ ಎಂದು ಹೇಳಿದರು.ಜಿಲ್ಲೆಯಲ್ಲಿರುವ ಮಳೆ ಮಾಪನಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಭಾರತದ ನಾಗರಿಕ ನೋಂದಣಿ ಜನನ ಮರಣ ಅಧಿನಿಯಮ 1969 ರನ್ವಯ ಕರ್ನಾಟಕ ಜನನ ಮರಣ ನೋಂದಣಿ ನಿಯಮ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ನಿಯಮ 1999 ರನ್ವಯ ಜನನ ಮರಣ ನೋಂದಣಿ ಕಡ್ಡಾಯ. ಮತ್ತು ಜನನ ಮರಣ ಸಂಭವಿಸಿದ ಸ್ಥಳದಲ್ಲಿ ನೋಂದಣಿ ಮಾಡಿ, ಘಟನೆಗಳ ನಡೆದ ಸ್ಥಳದಲ್ಲಿ ವರದಿಯನ್ನು ಸಕಾಲದಲ್ಲಿ ಸಲ್ಲಿಸಬೇಕು ಎಂದರು.

ಜಿಲ್ಲೆಯಲ್ಲಿ 226 ಗ್ರಾಮ ಪಂಚಾಯಿತಿಗಳಿದ್ದು, ಎಲ್ಲ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಜನನ ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸು ವುದರಿಂದ ಘಟನೆ ಸಂಭವಿಸಿದ 21 ದಿನಗಳ ಒಳಗೆ ಉಚಿತ ನೋಂದಣಿಯನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.

ಇನ್ನು ಮುಂದೆ ಎಲ್ಲಾ ನೋಂದಣಾಧಿಕಾರಿಗಳು ಇ - ಜನ್ಮ ತಾಂತ್ರಾಂಶದಲ್ಲಿ ಜನನ ಮರಣ ನೋಂದಾಯಿಸುವುದು ಸರ್ಕಾರ ಕಡ್ಡಾಯಗೊಳಿಸಿದೆ ಎಂದರು. ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.ಪೋಟೋ ಫೈಲ್‌ ನೇಮ್‌ 21 ಕೆಸಿಕೆಎಂ 2

Share this article