ಕನ್ನಡ ಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿ ಧೋದ್ದೇಶ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಹಯೋಗದಲ್ಲಿ ನಡೆದ ವಿಕಲಚೇತನರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರಿಗೆ 2016 ಕಾಯ್ದೆ ಅನ್ವಯ ಸರ್ಕಾರ 21 ವಿಷಯಗಳ ಬಗ್ಗೆ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಅರ್ಹರಿಗೆ ತಲುಪಿಸುವ ಕಾರ್ಯದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಾರ್ಯಕ್ರಮ ರೂಪಿಸಬೇಕು ಎಂದರು.ಗ್ರಾಮೀಣ ಭಾಗದ ವಿಕಲಚೇತನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಸಾಕಷ್ಟು ಅರಿವು ಇರುವುದಿಲ್ಲ ಅಂಥವರನ್ನು ಗುರುತಿಸಿ ಯೋಜನೆಗಳ ಸೌಲಭ್ಯ ದೊರಕಿಸಿಕೊಡಬೇಕು ಎಂದರು.
ಬೆಸಗರಹಳ್ಳಿ ಶಾಲೆಯಲ್ಲಿ ಮಕ್ಕಳ ಸಂತೆ
ತಾಲೂಕಿನ ಬೆಸಗರಹಳ್ಳಿಯ ಪುಣ್ಯಕೋಟಿ ಎಜುಕೇಶನ್ ಟ್ರಸ್ಟ್ ವತಿಯಿಂದ ಶನಿವಾರ ಶಾಲೆ ಆವರಣದಲ್ಲಿ ಮಕ್ಕಳ ಸಂತೆ ನಡೆಯಿತು.
ಜನಪ್ರತಿನಿಧಿಗಳು. ಗ್ರಾಮಸ್ಥರುಗಳು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ನಿವೃತ್ತ ಪ್ರಾಂಶುಪಾಲರಾದ ಯದು ಶೈಲಾ ಸಂಪತ್ ಮಕ್ಕಳ ಸಂತೆಗೆ ಚಾಲನೆ ನೀಡಿದರು. ದಿನನಿತ್ಯ ಆಟ ಪಾಠಗಳಲ್ಲಿ ತಲ್ಲಿನರಾಗಬೇಕಾಗಿದ್ದ ಮಕ್ಕಳು ಸಂತೆ ಏರ್ಪಡಿಸಿರುವುದು ವಿಶೇಷವಾಗಿದೆ. ಸಾರ್ವಜನಿಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.