ಪುತ್ತೂರಿಗೆ ೩೦೦ ಬೆಡ್‌ ಆಸ್ಪತ್ರೆ ಮೆಡಿಕಲ್ ಕಾಲೇಜಿಗೆ ಅಧಿಕೃತ ಆದೇಶ

KannadaprabhaNewsNetwork |  
Published : Dec 03, 2025, 03:00 AM IST
ಫೋಟೋ: ೧ಪಿಟಿಆರ್-ಎಂಎಲ್‌ಎ ೧, ಎಂಎಲ್‌ಎ ೨, ಎಂಎಲ್‌ಎ ೩ | Kannada Prabha

ಸಾರಾಂಶ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು ಆರ್ಥಿಕ ಇಲಾಖೆ ಸಮ್ಮತಿಸಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಒಂದೂವರೆ ತಿಂಗಳಲ್ಲಿ ಡಿಪಿಆರ್, 2 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ: ಅಶೋಕ್‌ ರೈ

ಪುತ್ತೂರು: ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು ಆರ್ಥಿಕ ಇಲಾಖೆ ಸಮ್ಮತಿಸಿದೆ. 2025-26ನೇ ಸಾಲಿನ ಆಯುವ್ಯಯ ಭಾಷಣದ ಕಂಡಿಕೆ-130ನ್ನು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆಯೂ ತಿಳಿಸಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸೋಮವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 1 ಸಾವಿರ ಕೋಟಿ ರು. ಬಜೆಟ್ ಅಂದಾಜಿಸಲಾಗಿದ್ದು, ಕಡತ ಆರ್ಥಿಕ ಇಲಾಖೆಯಲ್ಲಿ ಇದೆ. ಒಂದೂವರೆ ತಿಂಗಳ ಒಳಗಾಗಿ ಡಿಪಿಆರ್ ಆಗಿ 2 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಮೊದಲನೆಯದಾಗಿ ಬನ್ನೂರಿನಲ್ಲಿ 40 ಎಕ್ರೆ ಜಾಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಬೇಕು, 2ನೆಯದಾಗಿ ಆರೋಗ್ಯ ಇಲಾಖೆಯ ಕಡತವನ್ನು ತೆಗೆದು ಮೆಡಿಕಲ್ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಬೇಕು, 3ನೆಯದಾಗಿ 300 ಬೆಡ್ ಆಸ್ಪತ್ರೆ ನಿರ್ಮಾಣ ಆಗಲೇಬೇಕು ಎಂದು ಬೇಡಿಕೆ ಮುಂದಿಟ್ಟಿದ್ದು, ಈ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಡೇರಿಸಿದ್ದಾರೆ ಎಂದರು.ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ:

ಬನ್ನೂರಿನಲ್ಲಿ 40 ಎಕ್ರೆ ಜಾಗದಲ್ಲಿ ಮೆಡಿಕಲ್ ಆಸ್ಪತ್ರೆ ನಿರ್ಮಾಣ ಆಗುತ್ತಿದ್ದಂತೆ ಪುತ್ತೂರು ತಾಲ್ಲೂಕು ಆಸ್ಪತ್ರೆ ಮಹಿಳೆಯರ ಹೆರಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಲಿದೆ ಎಂದರು.

ಮುಂದೆ ಬನ್ನೂರು ಮಿನಿ ಮಣಿಪಾಲ ಆಗಲಿದೆ. ಸುಮಾರು 6 ಸಾವಿರದಿಂದ 7 ಸಾವಿರ ಮಂದಿಗೆ ಉದ್ಯೋಗ ದೊರಕಲಿದೆ. ಅದರಲ್ಲಿಯೂ ದ.ಕ. ಮತ್ತು ಉಡುಪಿ ಜಿಲ್ಲೆಯ ತುಳು ಮಾತನಾಡುವವರಿಗೆ ಆದ್ಯತೆಯಾಗಿ ಉದ್ಯೋಗ ನೀಡುವಂತಾಗಲಿದೆ ಎಂದರು.

ಕೆಪಿಸಿಸಿ. ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗ್ಯಾರಂಟಿ ಯೋಜನೆ ಅಧ್ಯಕ್ಷ ಉಮಾನಾಥ ರೈ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಗ್ಯಾರಂಟಿ ಯೋಜನೆ ಸದಸ್ಯ ಲ್ಯಾನ್ಸಿ ಮಸ್ಕರೇನಸ್, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್, ಉಪಸ್ಥಿತರಿದ್ದರು.ದೇವರಿಗೆ ಶಾಸಕ ಕೃತಜ್ಞತೆ:

ಪುತ್ತೂರು ಮೆಡಿಕಲ್ ಕಾಲೇಜಿಗೆ ಸರಕಾರದಿಂದ ಅಧಿಕೃತ ಮಾನ್ಯತೆ ದೊರಕಿದ್ದು ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಮೆಡಿಕಲ್ ಕಾಲೇಜು ಮಂಜೂರಾತಿಗೆ ಸರಕಾರದಿಂದ ಅಧಿಕೃತ ಆದೇಶ ಪ್ರಕಟವಾದ ಸುದ್ದಿ ಸಿಗುತ್ತಿದ್ದಂತೆಯೇ ಶಾಸಕರು ಕೋಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ, ಪುತ್ತೂರಿನ ಶ್ರೀ ಮಹಾಲಿಮಗೇಶ್ವರ ದೇವಸ್ಥಾನ , ಪುತ್ತೂರು ಕೇಂದ್ರ ಜುಮಾ ಮಸೀದಿ ಹಾಗೂ ಪುತ್ತೂರು ಮಾಯಿದೆದೇವುಸ್ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ , ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ , ಉಮಾನಾಥ ಶೆಟ್ಟಿ ಪೆರ್ನೆ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರೈ ಮಟಂತಬೆಟ್ಟುಪ್ರಮುಖರಾದ ಸುದೆಶ್ ಶೆಟಿ, ಶಿವರಾಮ ಆಳ್ವ, ರವಿಪ್ರಸಾದ್ ಶೆಟ್ಟಿ ಬನ್ನೂರು, ಪಂಜಿಗುಡ್ಡೆ ಈಶ್ವರಭ್, ರೋಶನ್ ರೈ ಬನ್ನೂರು, ಫಾರೂಕ್ ಬಾಯಬ್ಬೆ, ನೂರುದ್ದೀನ್ ಸಾಲ್ಮರ, ಅಬ್ದುಲ್ ರಹಿಮಾನ್ ಆಝಾದ್, ಸಿಯಾನ್ ದರ್ಬೆ, ವಿನಯ್ , ಶರೂನ್ ಸಿಕ್ವೆರಾ, ಲ್ಯಾನ್ಸಿ ಮಸ್ಕರೇನಸ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ