ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ ಅಧಿಕಾರಿಗಳು, ಗುತ್ತಿಗೆದಾರರು ಹೊಣೆ : ಶಾಸಕ ತಮ್ಮಯ್ಯ

KannadaprabhaNewsNetwork |  
Published : Dec 02, 2025, 01:08 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು. ಎಂ.ಎಲ್‌. ಮೂರ್ತಿ, ಕೆ. ಮಹಮದ್‌, ಮಂಜೇಗೌಡ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರುತಾಲೂಕಿನ ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಕೊಂಡದಖಾನ್‌ ಎಸ್ಟೇಟ್ ಸಮೀಪ ವಾಸಿಸುತ್ತಿರುವ ಸಾರ್ವಜನಿಕರಿಗೆ ಅಲ್ಲೇ ಇರುವ ಜಾಗದಲ್ಲಿ ನಿವೇಶನ ಕೊಡಿಸುವ ಜೊತೆಗೆ ಹಕ್ಕುಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.

ಮೂರು ಕಿರು ಸೇತುವೆ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುತಾಲೂಕಿನ ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಕೊಂಡದಖಾನ್‌ ಎಸ್ಟೇಟ್ ಸಮೀಪ ವಾಸಿಸುತ್ತಿರುವ ಸಾರ್ವಜನಿಕರಿಗೆ ಅಲ್ಲೇ ಇರುವ ಜಾಗದಲ್ಲಿ ನಿವೇಶನ ಕೊಡಿಸುವ ಜೊತೆಗೆ ಹಕ್ಕುಪತ್ರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.ಶಿರವಾಸೆ ಗ್ರಾ.ಪಂ ವ್ಯಾಪ್ತಿಯಲ್ಲಿ ₹9.40 ಕೋಟಿ ವಿವಿಧ ರಸ್ತೆಗಳ ಅಭಿವೃದ್ಧಿ ಹಾಗೂ ₹50 ಲಕ್ಷ ವೆಚ್ಚದ ಮೂರು ಕಿರು ಸೇತುವೆ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ಈ ಭಾಗಕ್ಕೆ ಆಗಮಿಸಿದ ಸಂದರ್ಭದಲ್ಲಿ ಮೂರು ಬೇಡಿಕೆಗಳನ್ನು ಇಡಲಾಗಿದೆ. ಅದರಲ್ಲಿ ಪ್ರಮುಖವಾದ ರಸ್ತೆ ಬೇಡಿಕೆ ಈಡೇರಿಸಿದ್ದೇವೆ. ಅತಿ ಶೀಘ್ರವಾಗಿ ಗುಣಮಟ್ಟದ ರಸ್ತೆ ಅಭಿವೃದ್ಧಿಯಾಗಬೇಕು. ಇಲ್ಲದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಸಿದರು.

ನಿವೇಶನಕ್ಕೆ ಮೀಸಲಿಟ್ಟಿರುವ ಜಾಗದ ಬಗ್ಗೆ ಈಗಾಗಲೇ ಅರಣ್ಯ, ಕಂದಾಯ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಈ ಜಾಗ ಅರಣ್ಯ ಇಲಾಖೆ ವ್ಯಾಪ್ತಿಯ ಡೀಮ್ಡ್‌ ಎಂದು ಗುರುತಿಸಲಾಗಿದ್ದು, ರುಡಾಲ್ಫ್‌ ಅವರ ಕಂಪನಿ ಎಸ್ಟೇಟ್‌ನವರು ಸಾರ್ವಜನಿಕರಿಗೆ ನಿವೇಶನ ಹಂಚುವುದಾದರೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದರು.ಸರ್ಕಾರ ಕಾನೂನು ವ್ಯಾಪ್ತಿಯಲ್ಲಿ ಜನಪರ ಕೆಲಸಗಳಿಗೆ ಬದ್ಧವಾಗಿದ್ದು, ರಸ್ತೆ ಮತ್ತು ನಿವೇಶನ ಕೊಡುವ ಕುರಿತು ಅಗತ್ಯ ದಾಖಲೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಈಗಾಗಲೇ ಹಕ್ಕುಪತ್ರಗಳನ್ನು ಶೀಘ್ರವಾಗಿ ವಿತರಿಸುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.ಕ್ಷೇತ್ರದ 34 ಗ್ರಾಪಂಗಳು ಹಾಗೂ ಚಿಕ್ಕಮಗಳೂರು ನಗರದ 35 ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ಸಮರೋಪಾ ದಿಯಲ್ಲಿ ನಡೆಯಬೇಕೆಂಬ ಉದ್ದೇಶದಿಂದ ಗುದ್ದಲಿ ಪೂಜೆ ನಡೆಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿ, ನಿವೇಶನ ನೀಡಿ ಹಕ್ಕುಪತ್ರ ನೀಡಬೇಕು, ಕೊಂಡದ ಖಾನ್‌ನಿಂದ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದೆ. ಇದರಿಂದ ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.ಕಾರ್ಯಕ್ರಮದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಕೆ. ಮಹಮದ್, ಶಿರವಾಸೆ ಗ್ರಾಪಂ ಮಾಜಿ ಅಧ್ಯಕ್ಷೆ ಪ್ರೇಮಾಕ್ಷಿ, ರಾಧ, ರವಿ, ಚಂದ್ರೇಗೌಡ, ಕುಳ್ಳನ್, ಲೋಬೋ, ಗಿರೀಶ್, ಸಂದೀಪ್, ವಿಶ್ವನಾಥ್, ಶಿವಕುಮಾರ್, ನರೇಂದ್ರ, ಪ್ರಸನ್ನ, ಅನಿಲ್‌ಗೌಡ ಉಪಸ್ಥಿತರಿದ್ದರು.

1 ಕೆಸಿಕೆಎಂ 2ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು. ಎಂ.ಎಲ್‌. ಮೂರ್ತಿ, ಕೆ. ಮಹಮದ್‌, ಮಂಜೇಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ