ಕುಡಿವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೆ ಹೊಣೆ: ಶಾಸಕ ಆರ್‌.ಬಸನಗೌಡ

KannadaprabhaNewsNetwork |  
Published : Feb 06, 2024, 01:34 AM ISTUpdated : Feb 06, 2024, 03:03 PM IST
Janatha Darshan

ಸಾರಾಂಶ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕ್ಷೇತ್ರದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಧಿಕಾರಿಗಳು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ಶಾಸಕ ಆರ್‌.ಬಸನಗೌಡ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಸ್ಕಿ

ಸಾರ್ವಜನಿಕರ ಅನೂಕೂಲಕ್ಕಾಗಿ ಸರ್ಕಾರದಿಂದ ಬಂದಿರುವ ಅನುಧಾನದಲ್ಲಿ ನಡೆಯುತ್ತಿರುವ ಜೆಜೆಎಂ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಸೂಕ್ತಗುಣಮಟ್ಟದೊಂದಿಗೆ ತ್ವರಿತವಾಗಿ ಮುಗಿಸಿ ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ತಾಲೂಕಿನ ಅಂಕುಶದೊಡ್ಡಿ ಗ್ರಾಪಂ ವ್ಯಾಪ್ತಿಯ ವಿವಿದ ಗ್ರಾಮಗಳಲ್ಲಿ ಸೋಮವಾರ ನಡೆದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಬೇಸಿಗೆ ಆರಂಭವಾಗುತ್ತಿದ್ದು, ಕ್ಷೇತ್ರದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಅಧಿಕಾರಿಗಳು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಂದು ವೇಳೆ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೆ ನೇರ ಹೊಣೆಗಾರರು ಎಂದು ಎಚ್ಚರಿಕೆ ನೀಡಿದರು. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೆಜೆಎಂ ಯೋಜನೆಯಲ್ಲಿ ನೆಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾನು ರೈತರ ಮಗ. ಪ್ರತಿನಿತ್ಯ ರೈತರ ಸಂಪರ್ಕದಲ್ಲಿದ್ದೇನೆ. ರೈತರ ಋಣ ತೀರಿಸಲು ಮತ್ತು ಅವರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಅರಮನೆ ಸುಧಾ, ತಾಪಂ ಇಒ ಉಮೇಶ, ಅಂಕುಶದೊಡ್ಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಮ್ಮ ಹನುಂತಪ್ಪ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಘಟಕ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಸಿದ್ದನಗೌಡ ಮಾಟೂರು, ಆದನಗೌಡ, ಮಹಿಬೂಬಸಾಬ್ ಮುದ್ದಾಪೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ