ಜಗಳೂರು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
ತಾಲೂಕಿನಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ, ಕುಡಿಯುವ ನೀರು, ದನ, ಕರುಗಳಿಗೆ ಮೇವು, ಸರ್ಕಾರದ ಗ್ಯಾರಂಟಿ ಯೋಜನೆ ಸೌಲಭ್ಯಗಳು, ರೈತರಿಗೆ ಬರ ಪರಿಹಾರ ಸಮರ್ಪಕವಾಗಿ ಸಿಗುವಂತೆ ಅಧಿಕಾರಿಗಳು ಮುಂಜಾಗೃತ ಕ್ರಮ ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ೨೦೨೩-೨೪ ನೇ ಸಾಲಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬರಗಾಲ ಇರುವುದರಿಂದ ಜಗಳೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಿ.ಸಿ.ರಸ್ತೆಗಳು, ಕಾಪೌಂಡಗಳು, ಸರ್ಕಾರಿ ಕಟ್ಟಡಗಳ ನಿರ್ಮಿಸುವ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸೂಚಿಸಿದರು.ರೈತರು ಕಟ್ಟಿದ ಬೆಳೆ ವಿಮೆ, ಬೆಳೆ ಪರಿಹಾರ ರೈತರ ಖಾತೆಗಳಿಗೆ ಸಮರ್ಪಕವಾಗಿ ಜಮಾ ಆಗುವಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಆ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕೆಂದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಅನಾವಶ್ಯಕ ರಜೆ ಪಡೆಯದೆ ಕೆಲಸ ನಿರ್ವಹಿಸಲು ಸೂಚಿಸಿದರು.
ಕುಡಿವ ನೀರು ಬಗ್ಗೆ ಮುಂಜಾಗೃತರಾಗಿರಿ:
ಕೃಷಿ, ತೋಟಗಾರಿಕೆ, ಪಶು, ಕುಡಿಯುವ ನೀರು ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಗಳ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಇಟ್ನಾಳ್, ಅಪಾರ ಜಿಲ್ಲಾಧಿಕಾರಿ ಲೋಕೇಶ್, ಎಸಿ ದುರ್ಗಾಶ್ರೀ, ತಹಸೀಲ್ದಾರ್ ಸಯೀದ್ ಕಲೀಮ್‌ವುಲ್ಲಾ, ಇಒ ಕರಿಬಸಪ್ಪ ಸೇರಿ ಇತರರಿದ್ದರು. ನೀರಿನ ಘಟಕ ಸದಾ ಸುಸ್ಥಿತಿಯಲ್ಲಿರಲಿ
ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ