- ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ । ಕಾಡ್ಗಿಚ್ಚು ಅಪಾಯಗಳ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ದಿನೇದಿನೇ ಹೆಚ್ಚುತ್ತಿರುವ ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬೇಸಿಗೆಯಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ಮತ್ತು ಮಳೆ ಮಾಪನ, ಹವಾಮಾನ ಮಾಪನ ಕೇಂದ್ರಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬೇಸಿಗೆ ತಾಪಮಾನ ಹೆಚ್ಚಾಗುತ್ತಿದ್ದು, ಕಾಡ್ಗಿಚ್ಚಿನ ಅಪಾಯಗಳ ಬಗ್ಗೆ ತಹಸೀಲ್ದಾರ್‌ಗಳು ಎಚ್ಚರಿಕೆ ವಹಿಸಬೇಕು. ಒಣಗಿದ ಎಲೆಗಳಿಗೆ ಬೆಂಕಿ ತಗುಲಿದರೆ ತೋಟಗಳು ಮತ್ತು ಇಡೀ ಗ್ರಾಮಕ್ಕೂ ಹರಡುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಕಂದಾಯ ಗ್ರಾಮ ಆಡಳಿತಾಧಿಕಾರಿಗಳು ಸದಾ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆಯಿಲ್ಲ ಮತ್ತು ಮುಂದಿನ ಹಲವು ವಾರಗಳವರೆಗೆ ಸಾಕಾಗುವಷ್ಟು ದಾಸ್ತಾನು ಇಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಮಳೆಮಾಪನ ಕೇಂದ್ರಗಳ ನಿರ್ವಹಣೆ:
206 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ:
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಚನ್ನಪ್ಪ, ಪಾಲಿಕೆ ಆಯುಕ್ತ ಡಾ. ಮಹಂತೇಶ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಉಪಸ್ಥಿತರಿದ್ದರು.
(ಬಾಕ್ಸ್) * ಹೀಟ್ ರಿಸ್ಕ್ ಎಂಬ ಹೊಸ ವೆಬ್‌ಲಿಂಕ್ ಬಿಸಿಲಿನ ತಾಪಮಾನ ಮತ್ತು ಹವಾಮಾನ ವೈಪರೀತ್ಯಗಳನ್ನು ಮುಂಚಿತವಾಗಿ ತಿಳಿಯಲು ಐಐಎಸ್‌ಸಿ ಸಹಯೋಗದೊಂದಿಗೆ ಹೀಟ್ ರಿಸ್ಕ್ ಎಂಬ ಹೊಸ ವೆಬ್‌ಲಿಂಕ್ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿದೆ. ಇದು ಮುಂದಿನ 5 ದಿನಗಳ ಹವಾಮಾನ ಮುನ್ಸೂಚನೆ ನೀಡುತ್ತದೆ. ಬಿಸಿಲಿನ ತಾಪಕ್ಕೆ ಅನುಗುಣವಾಗಿ ವಿವಿಧ ಇಲಾಖೆಗಳು ತಮ್ಮ ಕೆಲಸದ ಅವಧಿ ನ್ನು ಬದಲಾಯಿಸಿಕೊಳ್ಳಲು ಇದು ಸಹಕಾರಿಯಾಗಲಿದೆ. ಜಿಲ್ಲೆಯ ಎಲ್ಲ ಆರು ತಾಲೂಕುಗಳಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲಾಗಿದೆ ಎಂದರು.
-11ಕೆಡಿವಿಜಿ35:
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಎಸಿ, ಪಾಲಿಕೆ ಆಯುಕ್ತರು, ತಹಸೀಲ್ದಾರರು, ಇಲಾಖೆ ಅಧಿಕಾರಿಗಳು ಇದ್ದರು.