- ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
--- ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ
- ಆರ್ಥಿಕ ಮತ್ತು ಭೌತಿಕ ಗುರಿಗಳಿಗೆ ಅನುಗುಣವಾಗಿ ಪ್ರಗತಿ- ಐಟಿಐ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ಮನೆ ಮನೆ ಸಮೀಕ್ಷೆ
- ಉದ್ಯೋಗಸ್ಥ ಮಹಿಳಾ ವಸತಿ ನಿಲಯ ಸ್ಥಾಪಿಸಲು ಮನವಿ- ಶಿಕ್ಷಣ ವಂಚಿತ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ದಾಖಲಿಸಿ
-ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಲು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮಕ್ಕಳನ್ನು ಅವರ ಮಾತೃ ಭಾಷೆಯಲ್ಲಿ ಮಾತನಾಡಿಸುವ ಸಾಮರ್ಥ್ಯ ಇರಬೇಕು ಹಾಗೂ ಅಂಗನ ವಾಡಿ ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಅಂತವರನ್ನು ಪುನಃ ಶಾಲೆಗೆ ದಾಖಲಿಸಿ ಅವರಿಗೆ ವಿದ್ಯಾಭ್ಯಾಸ ನೀಡಲು ಸೂಚಿಸಿದರು.
ಸಂವಾದದಲ್ಲಿ ಅಲ್ಪಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಅಲ್ಪ ಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಇಲಾಖೆ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾಧ್ಯವಾದಷ್ಟು ಆರ್ಥಿಕ ಮತ್ತು ಭೌತಿಕ ಗುರಿಗಳಿಗೆ ಅನುಗುಣವಾಗಿ ಪ್ರಗತಿ ಸಾಧಿಸಬೇಕು ಎಂದರು.ಐಟಿಐ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ಸಲುವಾಗಿ ಮನೆ ಮನೆ ಸಮೀಕ್ಷೆ ಮಾಡಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮನವೊಲಿಸಿ ಅವರನ್ನು ತಮ್ಮ ಕಾಲೇಜಿಗೆ ದಾಖಲಾತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಉದ್ಯೋಗಸ್ಥ ಮಹಿಳಾ ವಸತಿ ನಿಲಯಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲು ಸರ್ಕಾರದ ಹಂತದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಮನವಿ ಮಾಡಿದರು.ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ಮುಜೀಬುಲ್ಲಾ ಜಫಾರಿ, ಅಲ್ಪಸಂಖ್ಯಾತರ ಆಯೋಗದ ಸದಸ್ಯ, ನಿವೃತ್ತ ಐಎಎಸ್ ಅಧಿಕಾರಿ ಅಬ್ದುಲ್ ಖಾದರ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
22 ಕೆಸಿಕೆಎಂ 4ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಮಾತನಾಡಿದರು.