ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಪ್ರಗತಿ ಕುರಿತು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಬೀದರ್ ದಕ್ಷಿಣ ಕ್ಷೇತ್ರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳ ಪ್ರಗತಿ ಕುರಿತು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಬೀದರ್ ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಕುಡಿಯುವ ನೀರು ಮತ್ತು ನೌರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕೃಷಿ ಇಲಾಖೆ, ತೋಟ ಗಾರಿಕೆ ಇಲಾಖೆ, ಪಶುಸಂಗೋಪನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ವಿದ್ಯುತ್ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ, ಸೇತುವೆ, ಚರಂಡಿ, ಕುಡಿಯುವ ನೀರು, ನೀರಾವರಿ, ಶಾಲಾ ಕಟ್ಟಡ, ಅಂಗನವಾಡಿ, ಆಸ್ಪತ್ರೆ, ಆರೋಗ್ಯ ಕೇಂದ್ರ, ಸಮುದಾಯ ಭವನ ಹಾಗೂ ಇತರೆ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನು ಇಲಾಖಾವಾರು ಪರಿಶೀಲಿಸಿದರು.ರೈತರಿಗೆ ಸೌಲಭ್ಯ ನೀಡಿ: ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಳೆ ಕೊರತೆ, ಬೆಳೆ ಪರಿಸ್ಥಿತಿ, ರೈತರ ಸಮಸ್ಯೆಗಳು, ಬೆಳೆವಿಮೆ ಹಾಗೂ ಕೃಷಿ ಸಂಬಂಧಿತ ಪರಿಹಾರ ಕ್ರಮಗಳ ಕುರಿತು ಮಾಹಿತಿ ಪಡೆದು ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕ್ಷೇತ್ರಕ್ಕೆ ಭೇಟಿ ನೀಡಿ ಕಾಮಗಾರಿಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವಂತೆ ಶಾಸಕರು ಸೂಚಿಸಿದರು. ಸಭೆಯಲ್ಲಿ ತಹಶೀಲ್ದಾರ್ ರವಿಕುಮಾರ ದಾಮಾ, ತಾ.ಪಂ ಅಧಿಕಾರಿ ಮಾಣಿಕರಾವ್ ಪಾಟೀಲ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.