ಕನ್ನಡಪ್ರಭ ವಾರ್ತೆ ಮಧುಗಿರಿ
ಇಲ್ಲಿನ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಮಧುಗಿರಿ ಉಪವಿಭಾಗ ವ್ಯಾಪ್ತಿಯ ಶಾಸಕರು ಮತ್ತು ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮುಂಗಾರು ಮಳೆ, ಬೆಳೆ ಸ್ಥಿತಿ , ಕುಡಿವ ನೀರು, ಜಾನುವಾರುಗಳಿಗೆ ಮೇವು ಲಭ್ಯತೆ, ಉದ್ಯೋಗ ಸೃಷ್ಠಿ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿರಾ,ಪಾವಗಡ ಮತ್ತು ಮಧುಗಿರಿ ತಾಲೂಕುಗಳಲ್ಲಿ ಮಳೆ ,ಬೆಳೆ ಸ್ಥಿತಿ ಗತಿ ಕಂಡು ಮರುಗಿದ ಪರಮೇಶ್ವರ್ ರೈತರಿಗೆ ,ಜನ ಜಾನುವಾರುಗಳಿಗೆ ಅತ್ಯಂತ ದೊಡ್ಡ ಮಟ್ಟದಲ್ಲಿ ಮಳೆ ಬೀಳದೆ ಪೆಟ್ಟು ಬಿದ್ದಿರುವುದನ್ನು ಮನಗಂಡು ಮಧುಗಿರಿ ತಾಲೂಕಿನ ಅವರಗಲ್ಲು ಗ್ರಾಮದ ರೈತರ ಜಮೀನುಗಳಿಗೆ ತೆರಳಿ ವಿವಿಧ ಬೆಳೆಗಳ ಪರಿಶೀಲಿಸಿದ್ದೇನೆ. ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಕಂದಾಯ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಬೇಕು. ಅಧಿಕಾರಿಗಳು ಕಚೇರಿಯಲ್ಲಿ ಜನರ ಕೈಗೆ ಸಿಗಲ್ಲ ಎಂದರೆ ಏನರ್ಥ.? ಏನೂ ಆಟ ಆಡುತ್ತೀರಾ? ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಗ್ರಾಮೀಣರಿಗೆ ಸ್ಥಳೀಯವಾಗಿ ಬಿವಿಜಿ ರಾಮ್ ಜಿ ಯೋಜನೆಯಡಿ ಗ್ರಾಮಗಳಲ್ಲಿ ಕೈಗೊಳ್ಳುವ ಕಾಮಗಾರಿಗಳನ್ನು ಎಲ್ಲ ಇಲಾಖೆ ಅಧಿಕಾರಿಗಳು ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣರು ಗುಳೇ ಹೊಗದಂತೆ ಕ್ರಮ ಕೈಗೊಳ್ಳಬೇಕು ಎಂದರು.ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರ್ಕಾರದ ಸೌಲಭ್ಯ ಕೊಡಬೇಕು.ಬೆಳೆ ವಿಮೆ ಕಟ್ಟಿಸಿಕೊಂಡ ರೈತರಿಗೆ ವಿಮಾ ಮೊತ್ತ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿವ ನೀರನ್ನು ಜನ ಜಾನುವಾರುಗಳಿಗೆ ಪೂರೈಸಬೇಕು. ದನಕರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಿ ಎಂದರು.