ಪ್ರಜಾ ಸೇವೆ ಅಭಿಯಾನದಲ್ಲಿ ಅಧಿಕಾರಿಗಳು ಶಿಸ್ತಿನಿಂದ ಭಾಗವಹಿಸಬೇಕು: ಪೊನ್ನಣ್ಣ

KannadaprabhaNewsNetwork |  
Published : Sep 27, 2026, 02:45 AM IST
ಚಿತ್ರ : 26ಎಂಡಿಕೆ2 : ಶಾಸಕ ಪೊನ್ನಣ್ಣ ಅವರು ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾ ಸೇವೆ ಅಭಿಯಾನವನ್ನು ಜಾರಿಗೆ ತಂದಿದೆ. ಪ್ರತಿ ಮನೆಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜನರಿಗೆ ಹತ್ತಿರವಾಗುವಂತೆ ಹೋಬಳಿ ಮಟ್ಟದಲ್ಲಿ ಅಭಿಯಾನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಶಿಸ್ತು ಹಾಗೂ ಜವಾಬ್ದಾರಿಯಿಂದ ಭಾಗವಹಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸೂಚಿಸಿದರು.

ಮಡಿಕೇರಿ : ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾ ಸೇವೆ ಅಭಿಯಾನವನ್ನು ಜಾರಿಗೆ ತಂದಿದೆ. ಪ್ರತಿ ಮನೆಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜನರಿಗೆ ಹತ್ತಿರವಾಗುವಂತೆ ಹೋಬಳಿ ಮಟ್ಟದಲ್ಲಿ ಅಭಿಯಾನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಶಿಸ್ತು ಹಾಗೂ ಜವಾಬ್ದಾರಿಯಿಂದ ಭಾಗವಹಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸೂಚಿಸಿದರು.ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಪ್ರಜಾ ಸೇವೆ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಪ್ರತಿ ಹೋಬಳಿಯಲ್ಲಿ ಪ್ರತಿ ಶನಿವಾರ ಅಭಿಯಾನ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದು, ಅದರಂತೆ ಮೊದಲಿಗೆ ಮಡಿಕೇರಿಯಲ್ಲಿ ಅಭಿಯಾನ ನಡೆದಿದ್ದು, ಇದೀಗ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್ 3ರಂದು ಬಲ್ಲಮಾವಟಿಯಲ್ಲಿ ಮುಂದಿನ ಅಭಿಯಾನ ನಡೆಯಲಿದೆ ಎಂದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಟ್ಟಾಗ ದೊರೆಯುವ ತೃಪ್ತಿಗೆ ಮಿಗಿಲಾದುದು ಯಾವುದೂ ಇಲ್ಲ. ಅಧಿಕಾರಿಗಳು ಶಿಷ್ಟಾಚಾರ ಕಾಪಾಡಬೇಕು. ಅಭಿಯಾನಕ್ಕೆ ಬಂದು ಅರ್ಜಿ ಸ್ವೀಕರಿಸಿ ತೆರಳದೆ, ಸಭೆ ಮುಗಿಯುವವರೆಗೆ ಹಾಜರಿದ್ದು, ಅಹವಾಲುಗಳಿಗೆ ಸ್ಥಳದಲ್ಲಿಯೇ ಸಾಧ್ಯವಾದಷ್ಟು ಪರಿಹಾರ ಒದಗಿಸಬೇಕು. ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.ಅರಣ್ಯ ಇಲಾಖೆ ಅಧಿಕಾರಿಗಳ ಗೈರಿಗೆ ಅಸಮಾಧಾನ

ಅರಣ್ಯ ಇಲಾಖೆಯ ಎಸಿಎಫ್ ಹಾಗೂ ಡಿಎಫ್‌ಒ ಮಟ್ಟದ ಅಧಿಕಾರಿಗಳು ಸಭೆಗೆ ಗೈರಾಗಿದ್ದಕ್ಕೆ ಪೊನ್ನಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಸೂಕ್ಷ್ಮ ಸಮಸ್ಯೆಗಳಿದ್ದು, ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸಭೆಗೆ ಹಾಜರಾಗದಿರುವುದು ಸರಿಯಲ್ಲ. ಇದರಿಂದ ಜನರಲ್ಲಿ ಇಲಾಖೆಯ ಮೇಲಿನ ವಿಶ್ವಾಸ ಕುಸಿಯುತ್ತದೆ ಎಂದು ಹೇಳಿದರು.ಗೈರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ ಅವರಿಗೆ ಸೂಚಿಸಿದ ಅವರು, ಅಗತ್ಯವಿದ್ದರೆ ಉಸ್ತುವಾರಿ ಸಚಿವರ ಗಮನಕ್ಕೂ ತಂದು ಕ್ರಮ ಕೈಗೊಳ್ಳಲಾಗುವುದು ಎಂದರು. ಅಧಿಕಾರಿಗಳೇ ಇಲ್ಲದಿದ್ದರೆ ಜನರ ಸಮಸ್ಯೆಗಳನ್ನು ಹೇಗೆ ಪರಿಹರಿಸಲು ಸಾಧ್ಯ ಎಂದು ಪ್ರಶ್ನಿಸಿದರು.ಜನರು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮೇಲಿನ ವಿಶ್ವಾಸದಿಂದ ಅಭಿಯಾನಕ್ಕೆ ಆಗಮಿಸಿದ್ದಾರೆ. ಸಮಸ್ಯೆ ಪರಿಹಾರವಾಗುವುದಿಲ್ಲ ಎಂಬ ಮನೋಭಾವ ಹೊಂದಿರುವವರಲ್ಲಿಯೂ ವಿಶ್ವಾಸ ಮೂಡಿಸುವುದು ಅಗತ್ಯ. ಜನರು ಅಧಿಕಾರಿಗಳ ಬಳಿಗೆ ಬರುವುದರ ಜೊತೆಗೆ ಅಧಿಕಾರಿಗಳು ಜನರ ಬಳಿಗೆ ತೆರಳಿ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಅಭಿಯಾನಕ್ಕೆ ಒಟ್ಟು 135 ಅರ್ಜಿಗಳು ಸಲ್ಲಿಕೆಯಾಗಿದ್ದು, ಟೋಕನ್ ಮೂಲಕ ಜೇಷ್ಠತೆಯ ಆಧಾರದಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಯಿತು.ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ, ಪೊನ್ನಂಪೇಟೆ ತಹಸೀಲ್ದಾರ್ ಸಂಜನಾ, ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಕುಮಾರ್, ತಾಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಸುಮಂಗಲ ಹಿರೇಮನಿ ಉಪಸ್ಥಿತರಿದ್ದರು.ಎಲ್ಲ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಾಳೆಲೆ ಪ್ರತಿಭಾ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ನಾಯ್ಡು ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಣೇಶ ವಿಗ್ರಹ ವಿಸರ್ಜನೆ ಸಂದರ್ಭ ನಾಲ್ಕು ಮಂದಿಗೆ ವಿದ್ಯುತ್ ಸ್ಪರ್ಶ : ಇಬ್ಬರು ಗಂಭೀರ
ಕಾರಿಡರ್‌ ಆವರಣಗೋಡೆ ಕುಸಿತ: ಓರ್ವ ಗಂಭೀರ, ಮೂವರಿಗೆ ಗಾಯ