ಕೊಪ್ಪಳ:
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮದ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಆರ್‌ಎಸ್ ಕಾರ್ನರ್ ಪ್ರಾರಂಭಿಸಿ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ಒಆರ್‌ಎಸ್ ಪ್ಯಾಕೆಟ್ ಮತ್ತು ಝಿಂಕ್ ಮಾತ್ರೆ ವಿತರಿಸಬೇಕು. ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ಅತಿಸಾರ ಭೇದಿ ಉಂಟಾಗದಂತೆ ಕೈತೊಳೆಯುವ ವಿಧಾನ ಹಾಗೂ ವೈಯಕ್ತಿಕ ಸ್ವಚ್ಛತೆದ ಬಗ್ಗೆ ತಿಳಿಸಬೇಕು ಎಂದು ಹೇಳಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಮಾತನಾಡಿ, ಎಲ್ಲ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪ್ರಕಾಶ ವಿ. ಮಾತನಾಡಿ, ಅತಿಸಾರ ಭೇದಿಯಿಂದ 5 ವರ್ಷದೊಳಗಿನ ಮಕ್ಕಳ ಮರಣ ನಿಯಂತ್ರಿಸಲು ಪ್ರತಿ ವರ್ಷ ಈ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತದೆ ಎಂದು ವಿವರಿಸಿದರು.