ಕನ್ನಡಪ್ರಭ ವಾರ್ತೆ ಉಡುಪಿ
ಅವರು ಗುರುವಾರ ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಪು ತಾಲೂಕು ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮದ ಮೂಲಕ ಅಧಿಕಾರಿಗಳು ನಾಗರಿಕರ ಧ್ವನಿಗೆ ಧ್ವನಿಯಾಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಷ್ಟಗಳನ್ನು ತಿಳಿಯುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜನಸಾಮಾನ್ಯರ ಸಮಸ್ಯೆಗಳಾದ ಪಹಣಿ ಬದಲಾವಣೆ, ಜಾತಿ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ ಹಾಗೂ ಇನ್ನಿತರ ಕಾರಣಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡದೇ ಸುಲಭವಾಗಿ ನೀಡುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಇಲ್ಲಿ ಸ್ವೀಕೃತಗೊಂಡ ಅರ್ಜಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಶೀಘ್ರದಲ್ಲೇ ಬಗೆಹರಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಡಿಎಫ್‌ಓ ಗಣಪತಿ, ಎಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ, ತಹಸೀಲ್ದಾರ್ ಪ್ರತಿಭಾ ಆರ್., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.