ಸರ್ಕಾರಿ ಯೋಜನೆ ಜನರಿಗೆ ತಲುಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Sep 04, 2025, 01:01 AM IST
03ಯಶ್‌ಪಾಲ್‌ | Kannada Prabha

ಸಾರಾಂಶ

ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಅರಿವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಉಡುಪಿ

ಸರ್ಕಾರದ ಯೋಜನೆಗಳ ಮಾಹಿತಿಗಳನ್ನು ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಮುತುವರ್ಜಿವಹಿಸಿ, ರೈತರು ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಸೂಚಿಸಿದರು.ಅವರು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಇಲಾಖಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮನ್ವಯ ಹೊಂದಿ, ಆರ್ಥಿಕ ನೆರವು ಪಡೆಯಲು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಭೇಟಿ ನೀಡುವ ರೈತರಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಬೇಕು. ಇದರೊಂದಿಗೆ ಜಿಲ್ಲೆಯ ಹೆಚ್ಚು ರೈತರು ಈ ಎಲ್ಲ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಮಾಡಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ನಾಯಕ್, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೇಂದ್ರ ಸರ್ಕಾರದ 6 ಲಕ್ಷ ರು. ಮತ್ತು ರಾಜ್ಯ ಸರ್ಕಾರದ 9 ಲಕ್ಷ ರು. ಸಹಾಯಧನದೊಂದಿಗೆ ಯೋಜನೆಯ ಅಡಿಯಲ್ಲಿ ಶೇ.50 ರಷ್ಟು ಅಥವಾ ಗರಿಷ್ಟ 15 ಲಕ್ಷ ರು. ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6500ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಸಾಲ ಮಂಜೂರಾಗಿದ್ದು, 2025-26 ಸಾಲಿನ ಆಯವ್ಯಯದಲ್ಲಿ 5000 ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ 206.00 ಕೋಟಿ ಅನುದಾನ ಘೋಷಣೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 374 ವಿವಿಧ ಉದ್ದಿಮೆದಾರರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಪ್ರಸ್ತುತ 43 ಫಲಾನುಭವಿಗಳು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಸೂರಜ್ ಶೆಟ್ಟಿ, ವೆಂಕಟೇಶ್ ನಾಯ್ಕ್, ರಾಜೇಶ್ ಡಿ.ಪಿ, ರೂಪಾಶ್ರೀ ಹಾಗೂ ಡಾ. ಫಜಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಯೋಜನೆಯ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಜು, ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಲೀಡ್ ಬ್ಯಾಂಕ್‌ನ ಸುಮನ್, ಕೆಪೆಕ್‌ನ ಅರವಿಂದ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕೃಷಿ ಇಲಾಖೆಯ ಅಧಿಕಾರಿ ಶ್ರೀರಾಮ್ ಹೆಗಡೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ