ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹ ರಾಗಿದ್ದರೂ ವಂಚಿತ ರಾಗಿರುವವರನ್ನು ಗುರ್ತಿಸಿ ಅವರಿಗೆ ಯೋಜನೆಯ ಫಲ ನೀಡಲಾಗುವುದು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ.
ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮತ್ತು ಸಮಿತಿ ಪದಾಧಿಕಾರಿಗಳು ಶ್ರಮಿಸಬೇಕು. ಒಬ್ಬ ಫಲಾನುಭವಿಯೂ ಯೋಜನೆಯಿಂದ ವಂಚಿತವಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಎಂ. ಜಯರಾಮ್ ತಿಳಿಸಿದರು.
ನಗರದ ತಾಲೂಕು ಪಂಚಾಯತಿ ಕಚೇರಿಯಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಕಚೇರಿ ಉದ್ಘಾಟಿಸಿ, ತಾಲೂಕು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರಿಗೂ ಈ ಯೋಜನೆಯ ಪ್ರಯೋಜನ ತಲುಪಬೇಕು ಎಂಬುದು ನಮ್ಮ ಉದ್ದೇಶ ಎಂದರು.
ಗೊಂದಲವಿದ್ದರೆ ಕಚೇರಿ ಸಂಪರ್ಕಿಸಿ
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಗ್ಯಾರಂಟಿಗಳಿಗೆ ಸಂಬಂಧಿಸಿ ಯಾವುದೇ ಗೊಂದಲವಿದ್ದರೆ ಜನರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಕಚೇರಿಗೆ ಸಂಪರ್ಕಿಸಬಹುದು. ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತರಾಗಿರುವವರನ್ನು ಗುರ್ತಿಸಿ ಅವರಿಗೆ ಯೋಜನೆಯ ಫಲ ನೀಡಲಾಗುವುದು.
ಚಿಕ್ಕಬಳ್ಳಾಪುರ ಯೋಜನಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಈಗ ಮಾತ್ರವಲ್ಲ. ಈ ಹಿಂದೆಯೂ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಕ್ರಾಂತಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹೊಸ ಕ್ರಾಂತಿ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯದವರು ಕೂಡ ಇಂದು ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದು ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಉಪಯುಕ್ತತೆ ಮತ್ತು ಮಹತ್ವ ತಿಳಿಸುತ್ತಿದೆ ಎಂದರು.
ಈ ವೇಳೆ ಜಿ ಶಾಸಕ ಕೆ.ಪಿ. ಬಚ್ಚೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರಾದ ಜಾತವಾರ ರಾಮಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್, ಮುಖಂಡರಾದ ನಂದಿ ಎಂ.ಆಂಜಿನಪ್ಪ, ಭರಣಿ ವೆಂಕಟೇಶ್, ಕಳವಾರ ಶ್ರೀಧರ್, ಆವುಲರೆಡ್ಡಿ,ಯಲುವಹಳ್ಳಿ ಜನಾರ್ಧನ್, ಲಕ್ಷ್ಮಣ್, ವಿಜಯ್ ಕುಮಾರ್,ಶ್ರೀನಿವಾಸ್, ಅಲ್ಲು ಅನಿಲ್, ನಂದಿಮಸೂದ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.