ನೀರಿನ ಸಮಸ್ಯೆಗೆ ಅಧಿಕಾರಿಗಳೇ ಹೊಣೆ

KannadaprabhaNewsNetwork |  
Published : Nov 25, 2026, 03:00 AM IST
ಹೊಣೆ | Kannada Prabha

ಸಾರಾಂಶ

ಭವಿಷ್ಯದಲ್ಲಿ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿನ ಮೂಲಗಳು ಮತ್ತು ನೀರು ಪೂರೈಕೆ ಯೋಜನೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಾಪಂ ಆಡಳಿತಾಧಿಕಾರಿ ರಾಮನಗೌಡ ಕನ್ನೋಳಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಭವಿಷ್ಯದಲ್ಲಿ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿನ ಮೂಲಗಳು ಮತ್ತು ನೀರು ಪೂರೈಕೆ ಯೋಜನೆಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಾಪಂ ಆಡಳಿತಾಧಿಕಾರಿ ರಾಮನಗೌಡ ಕನ್ನೋಳಿ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಹುಕ್ಕೇರಿ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಬೇಸಿಗೆ ಮುಗಿಯುವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ನೋಡಿಕೊಳ್ಳುವುದು ಪ್ರತಿ ಅಧಿಕಾರಿಯ ಜವಾಬ್ದಾರಿ. ಒಂದು ವೇಳೆ ನೀರಿನ ಸಮಸ್ಯೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಿ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.

ಬರಗಾಲ, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಸಹಜ. ಹೀಗಾಗಿ, ಈ ಬಗ್ಗೆ ಮುನ್ನಚ್ಚರಿಕೆ ವಹಿಸಿ ಶಾಶ್ವತ ಯೋಜನೆಗಳ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜಲಜೀವನ ಮಿಷನ್ ಯೋಜನೆ ಕಾಮಗಾರಿಗಳನ್ನು ತ್ವರಿತ ಮುಗಿಸಬೇಕು ಎಂದು ತಾಕೀತು ಮಾಡಿದರು.

ಜಿಪಂ, ತಾಪಂ ಅನಿರ್ಬಂಧಿತ ಅನುದಾನದ ಕ್ರಿಯಾ ಯೋಜನೆ ರೂಪಿಸಿ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಮುಕ್ತಾಯಗೊಳಿಸಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿ. ಪಿಡಿಒಗಳು ಮತ್ತು ನೋಡೆಲ್ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡಬಾರದು. ಶಾಲೆ, ಅಂಗನವಾಡಿಗಳ ಶಿಥಿಲ ಕೊಠಡಿಗಳನ್ನು ದುರಸ್ತಿಗೊಳಿಸಿ ಸೌಲಭ್ಯ ಒದಗಿಸಬೇಕು. ಹೊಸ ಕಟ್ಟಡಗಳಿಗೆ ಪ್ರಸ್ತಾವಣೆ ಸಲ್ಲಿಸಬೇಕು ಎಂದು ಕನ್ನೋಳಿ ಸೂಚಿಸಿದರು.

ತಾಪಂ ಇಒ ಟಿ.ಆರ್.ಮಲ್ಲಾಡದ, ಮ್ಯಾನೇಜರ್ ಅವಿನಾಶ ಹೊಳೆಪ್ಪಗೋಳ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ ಸ್ವಾಗತಿಸಿದರು. ಕಿರಣ ಅಂಬೇಕರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿಗೆ ಮಾದರಿಯಾಗಿದೆ ಜೊಲ್ಲೆ ಸಮೂಹ
ಉ.ಕ ಸಮಸ್ಯೆ ಚರ್ಚೆಗೆ 5 ದಿನ ಮೀಸಲಿಡಿ