ಚಳ್ಳಕೆರೆ ಲಕ್ಷ್ಮೀ ನರ್ಸಿಂಗ್ ಹೋಂಗೆ ಅಧಿಕಾರಿಗಳ ಭೇಟಿ

KannadaprabhaNewsNetwork |  
Published : Apr 12, 2026, 01:15 AM IST
ಚಿತ್ರದುರ್ಗ  ಎರಡನೇ ಪುಟದ ಮಿಡ್ಲ್111   | Kannada Prabha

ಸಾರಾಂಶ

ಚಳ್ಳಕೆರೆ ತಾಲೂಕಿನ ಶಾಲೆಯೊಂದರ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಗರ್ಭಪಾತ ಮಾಡಿಸಿದ್ದ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬಾಲಕಿ ಗರ್ಭಪಾತ ನಡೆದ ಆಸ್ಪತ್ರೆಗೆ ಶನಿವಾರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಚಳ್ಳಕೆರೆ ತಾಲೂಕಿನ ಶಾಲೆಯೊಂದರ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಗರ್ಭಪಾತ ಮಾಡಿಸಿದ್ದ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬಾಲಕಿ ಗರ್ಭಪಾತ ನಡೆದ ಆಸ್ಪತ್ರೆಗೆ ಶನಿವಾರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಆರೋಪಿ ಶಿಕ್ಷಕ ಬಾಲಕಿಯನ್ನು ಲೈಂಗಿಕವಾಗಿ ಉಪಯೋಗಿಸಿಕೊಂಡು ನಂತರ ತಾನೇ ಮುಂದೆ ನಿಂತು ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದನು ಎನ್ನಲಾಗಿದೆ. ಶನಿವಾರ ಮುಂಜಾನೆಯೇ ಪ್ರವಾಸಿ ಮಂದಿರದ ಪಕ್ಕದಲ್ಲೇ ಇರುವ ಲಕ್ಷ್ಮೀ ನರ್ಸಿಂಗ್ ಹೋಂಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರೇಣುಪ್ರಸಾದ್, ತಹಸೀಲ್ದಾರ್ ರೇಹಾನ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಶಿಕ್ಷಕ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ನಂತರ ನಾಲ್ಕು ತಿಂಗಳ ಗರ್ಭಿಣಿ ಆದಾಗ ಇದೇ ಖಾಸಗಿ ನರ್ಸಿಂಗ್ ಹೋಂಗೆ ಹೋಗಿ ಬಾಲಕಿಯ ವಯಸ್ಸನ್ನು 19 ವರ್ಷ ಎಂದು ನಮೂದಿಸಿದ ದಾಖಲೆ ಅಧಿಕಾರಿಗಳಿಗೆ ಲಭ್ಯವಾಗಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್ ಅವರನ್ನು ಕನ್ನಡಪ್ರಭ ಮಾತನಾಡಿಸಿದಾಗ ಫೆ28ಕ್ಕೆ ಶಿಕ್ಷಕ ರಾಜಣ್ಣ ಬಾಲಕಿಯನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆ ಅಪ್ರಾಪ್ತೆ ಎಂಬುದನ್ನು ಮರೆಮಾಚಲು ಸುಳ್ಳು ಹೇಳಿಕೆ ದಾಖಲಿಸಿ 19 ವರ್ಷ ಎಂಬುದಾಗಿ ಬರೆಸಿದ್ದಾರೆ.

ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ರೀತಿಯ ದಾಖಲೆಗಳನ್ನು ನೀಡಿಲ್ಲ. ಆಸ್ಪತ್ರೆಯವರೂ ಕೇಳಿಲ್ಲ. ರಾತ್ರಿ ಹೊತ್ತಿಗೆ ಬಾಲಕಿಗೆ ತೀವ್ರ ರಕ್ತಸ್ರಾವ ಆಗಿತ್ತು ಎಂಬುದಾಗಿ ಹೇಳಿಕೆ ನೀಡಿದ್ದಾರೆ ಎಂದರು.

ತಹಸೀಲ್ದಾರ್ ರೇಹಾನ ಪಾಷಾ, ತಾಲೂಕಿನ ಆರೋಗ್ಯಾಧಿಕಾರಿ ಡಾ. ಕಾಶಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದ ಏಳಿಗೆಯಲ್ಲಿ ಗುರುವಿನ ಪಾತ್ರ ಮಹತ್ವದ್ದು: ಇಂದ್ರಮ್ಮ
ಶರಣರ ವಿಚಾರಧಾರೆ ಮನುಕುಲದ ಮಂಗಳ ಸೌಭಾಗ್ಯ