ಪೌರ ಕಾರ್ಮಿಕರಿಗೆ‌ ಕನಿಷ್ಠ ಸೌಲಭ್ಯ ನೀಡದ ಅಧಿಕಾರಿಗಳು: ಬೇಸರ

KannadaprabhaNewsNetwork |  
Published : Sep 08, 2026, 02:00 AM IST
7ಕೆಎಂಎನ್ ಡಿ14 | Kannada Prabha

ಸಾರಾಂಶ

ತಮ್ಮ ಸುರಕ್ಷತೆ ಹಂಗು ತೊರೆದು ಪೌರ ಕಾರ್ಮಿಕರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯದ ವಿಷಯದಲ್ಲಿ ಸ್ಥಳಿಯ ಸಂಸ್ಥೆಗಳು ಕಾಳಜಿ ವಹಿಸಬೇಕು. ಕೆಲವೆಡೆ ಮೂರು ತಿಂಗಳಾದರು ಸಂಬಳ ನೀಡುತ್ತಿಲ್ಲ ಎಂಬ ದೂರುಗಳಿವೆ. ಕೂಡಲೇ ನಿಗದಿತ ಸಮಯದಲ್ಲಿ ಸಂಬಳ ನೀಡಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಪ್ರತಿ ನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡದಿರುವುದು ಬೇಸರ ಸಂಗತಿ ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಶಂಕರ್ ಅಂಕಣ ಶೆಟ್ಟಿಪುರ ತಿಳಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳ ವ್ಯಾಪ್ತಿಯ ಪೌರ ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಪೌರ ಕಾರ್ಮಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಬಹುತೇಕ ಕಡೆಗಳಲ್ಲಿ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನಗಳನ್ನೇ ನೀಡಿಲ್ಲ. ಕೆಲವೆಡೆ ನಿವೇಶನ ನೀಡಿದ್ದರು ಹಕ್ಕುಪತ್ರ ನೀಡಿಲ್ಲ ಎಂದರು.

ತಮ್ಮ ಸುರಕ್ಷತೆ ಹಂಗು ತೊರೆದು ಪೌರ ಕಾರ್ಮಿಕರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದಾರೆ. ಅವರ ಆರೋಗ್ಯದ ವಿಷಯದಲ್ಲಿ ಸ್ಥಳಿಯ ಸಂಸ್ಥೆಗಳು ಕಾಳಜಿ ವಹಿಸಬೇಕು. ಕೆಲವೆಡೆ ಮೂರು ತಿಂಗಳಾದರು ಸಂಬಳ ನೀಡುತ್ತಿಲ್ಲ ಎಂಬ ದೂರುಗಳಿವೆ. ಕೂಡಲೇ ನಿಗದಿತ ಸಮಯದಲ್ಲಿ ಸಂಬಳ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಪೌರ ಕಾರ್ಮಿಕರೊಬ್ಬರು ಗ್ರಂಥಾಲಯ ನಿರ್ಮಿಸುವಂತೆ ಮನವಿ ಮಾಡಿದಾಗ ಸಂತೋಷಗೊಂಡ ಆಯೋಗದ ಸದಸ್ಯರು ಶೀಘ್ರ ಗ್ರಂಥಾಲಯ ನಿರ್ಮಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಸಭಾ ವ್ಯವಸ್ಥಾಪಕ ಶ್ರೀಧರ್, ಮಳವಳ್ಳಿ ಪುರಸಭಾ ಮುಖ್ಯಾಧಿಕಾರಿ ನಾಗರತ್ನ, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್ ಸೇರಿದಂತೆ ಇತರರು ಇದ್ದರು.

ಕಸ ವಿಲೇವಾರಿ ಮಾಡುವವರ ಕಾಯಂ ಬಗ್ಗೆ ಸಿಎಂ ಭೇಟಿ, ಚರ್ಚೆ ಶಂಕರ್ ಅಂಕಣಶೆಟ್ಟಿಪುರ

ಕನ್ನಡಪ್ರಭ ವಾರ್ತೆ ಮದ್ದೂರು

ನಗರಸಭೆ ಮತ್ತು ಗ್ರಾಪಂಗಳಲ್ಲಿ ಕಸ ವಿಲೇವಾರಿ ಮಾಡುವ ವಾಹನ ಚಾಲಕರು, ಲೋಡರ್ಸ್ ಮತ್ತು ಕ್ಲೀನರ್ ಗಳನ್ನು ಕಾಯಂ ಮಾಡುವ ಬಗ್ಗೆ ಅಧ್ಯಕ್ಷರೊಂದಿಗೆ ಚರ್ಚಿಸಿ, ಶೀಘ್ರ ಸಿಎಂ ಭೇಟಿ ಮಾಡಿ ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಗಮನ ಸೆಳೆಯುವುದಾಗಿ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಶಂಕರ್ ಅಂಕಣಶೆಟ್ಟಿಪುರ ಭರವಸೆ ನೀಡಿದರು.

ನಗರಸಭೆ ವ್ಯಾಪ್ತಿಯ ಪೌರಕಾರ್ಮಿಕರ ವಸತಿ ಗೃಹಗಳಿಗೆ ಭೇಟಿ ನೀಡಿ ಮೂಲ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಈಗಾಗಲೇ ಕಾಯಂ ಗೊಂಡಿರುವ ನೌಕರರಿಗೆ ಸರ್ಕಾರದಿಂದ ನೇರವಾಗಿ ವೇತನ ಪಾವತಿ ಮಾಡಲಾಗುತ್ತಿದೆ. ಆದರೆ, ಗುತ್ತಿಗೆ ಆಧಾರದ ಮೇಲೆ ಕಸ ವಿಲೇವಾರಿ ಮಾಡುವ ವಾಹನ ಚಾಲಕರು, ಲೋಡರ್ಸ್ ಮತ್ತು ಕ್ಲೀನರ್ ಗಳ ನೇರ ವೇತನ ಪಾವತಿ ಆಗದಿರುವುದು ಬೇಸರದ ಸಂಗತಿ ಎಂದರು.

ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ಸಹಪೌರಕಾರ್ಮಿಕರ ಮನೆಗಳ ಹಕ್ಕು ಪತ್ರ ನೀಡಿಲ್ಲ. ಸಮುದಾಯ ಭವನಗಳು ತುಂಬಾ ಶಿಥಿಲಗೊಂಡಿವೆ. ಇವುಗಳನ್ನು ತೆರವುಗೊಳಿಸಿ ಹೊಸದಾಗಿ ಪೌರಕಾರ್ಮಿಕರ ಭವನ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಮದ್ದೂರು ನಗರಸಭೆ ವ್ಯವಸ್ಥಾಪಕ ಶ್ರೀಧರ್, ಮಳವಳ್ಳಿ ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ ಮತ್ತಿತರರು ಇದ್ದರು. ವ್ಯವಸ್ಥಾಪಕಿ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಮೆರಿಕನ್ನಡಿಗರ ಮಹೋತ್ಸವಕ್ಕೆ ಭಾವಪೂರ್ಣ ಮಂಗಳ
ಮರುಳಸಿದ್ದೇಶ್ವರ ಸನ್ನಿಧಿಯಲ್ಲಿ ಸಚಿವ ಬಸವಂತಪ್ಪ