ಕೆಎಸ್ಸಾರ್‌ನಲ್ಲಿ ಹಳೇ ರೈಲುಬೋಗಿಗೆ ಬೆಂಕಿ: ಸುಟ್ಟು ಭಸ್ಮ

KannadaprabhaNewsNetwork |  
Published : Sep 08, 2026, 04:15 AM IST
ಬೆಂಕಿ | Kannada Prabha

ಸಾರಾಂಶ

ನಗರದ ಕೆಎಸ್‌ಆರ್‌ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಸಂಖ್ಯೆ 1ರ ಸಮೀಪದಲ್ಲಿದ್ದ ಹಳೇ ರೈಲು ಬೋಗಿಯೊಂದಕ್ಕೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಕೆಎಸ್‌ಆರ್‌ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಸಂಖ್ಯೆ 1ರ ಸಮೀಪದಲ್ಲಿದ್ದ ಹಳೇ ರೈಲು ಬೋಗಿಯೊಂದಕ್ಕೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಸುಮಾರು 4 ವರ್ಷಗಳಿಂದ ಬಳಕೆಯಲ್ಲಿ ಇಲ್ಲದ ಹಳೇ ಬೋಗಿಯನ್ನು ಎಸಿ ರೈಲಿನ ಬೋಗಿಗಳ ದುರಸ್ತಿ ಕಾರ್ಯಕ್ಕಾಗಿ ನಿಲ್ಲಿಸಲಾಗಿತ್ತು. ಬೋಗಿಯೊಳಗೆ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದ ವೇಸ್ಟ್‌ ಮೆಟೀರಿಯಲ್‌, ಆಯಿಲ್‌, ನಟ್ಟು-ಬೋಲ್ಟ್‌ ಸೇರಿದಂತೆ ಹಲವು ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಈ ವಸ್ತುಗಳ ನಡುವೆ ಬೆಂಕಿ ಕಾಣಿಸಿಕೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆರಂಭದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಬೋಗಿಯೊಳಗೆ ಸಂಗ್ರಹಿಸಿಟ್ಟಿದ್ದ ತ್ಯಾಜ್ಯ ವಸ್ತುಗಳಿಗೆ ಯಾರಾದರೂ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಸಾಧ್ಯತೆ ಅಥವಾ ಬೀಡಿ, ಸಿಗರೆಟ್‌ನ ಉರಿಯುವ ತುಂಡು ಎಸೆದಿರುವುದರಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ. ಈ ಸಂಬಂಧ ಬೆಂಗಳೂರು ಸಿಟಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯ ಬರ ಪರಿಸ್ಥಿತಿ ಮನವರಿಕೆ ಮಾಡಿಕೊಡಿ: ಎ.ಎಸ್‌.ಪಾಟೀಲ ನಡಹಳ್ಳಿ
ಪೆಪ್ಪರ್ ಸ್ಪ್ರೇ ಹೊಡೆದು, ಪ್ರಜ್ಞೆ ತಪ್ಪಿಸಿ ಯುವತಿ ಮೇಲೆ ರೇಪ್