ಪ್ರವಾಹಕ್ಕೀಡಾಗಿರುವ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಭರವಸೆ ನೀಡಿದರು.ಮೂಡಲಗಿ
ಕನ್ನಡಪ್ರಭ ವಾರ್ತೆ ಮೂಡಲಗಿ
ಪ್ರವಾಹಕ್ಕೀಡಾಗಿರುವ ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಭರವಸೆ ನೀಡಿದರು.
ತಾಲೂಕಿನ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಂತ್ರಸ್ತರಿಗೆ ಅಗತ್ಯವಿರುವ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
ನಂತರ ಸುಣಧೋಳಿ, ಪಿ.ವೈ. ಹುಣಶ್ಯಾಳ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ, ಕಾಳಜಿ ಕೇಂದ್ರಗಳಲ್ಲಿನ ಸಂತ್ರಸ್ತರಿಗೆ ಹೊದಿಕೆ ವಿತರಿಸಿದ ಅವರು ಮಾತನಾಡಿದರು. ಬಹುತೇಕ ಕಡೆಗಳಲ್ಲಿ ನದಿ ತೀರದ ಸಂತ್ರಸ್ತರು ಸೂರು ಸಮಸ್ಯೆ ಬಗ್ಗೆ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಎಲ್ಲ ರೀತಿಯ ಅನುಕೂಲ ಕಲ್ಪಿಸುವುದಾಗಿ ಹೇಳಿದ ಅವರು, ನಿಮ್ಮ ನೋವುಗಳಿಗೆ ನಮ್ಮ ಕುಟುಂಬ ಸದಾ ಸ್ಪಂದಿಸುತ್ತದೆ. ನದಿ ನೀರಿನ ಮಟ್ಟ ಮತ್ತೆ ಏರಿಕೆಯಾಗುತ್ತಿದ್ದು, ಸಂತ್ರಸ್ತ ಕುಟುಂಬಗಳು ಸುರಕ್ಷಿತವಾಗಿ ಕಾಳಜಿ ಕೇಂದ್ರಗಳಲ್ಲಿ ವಾಸ ಮಾಡುವಂತೆ ಮನವಿ ಮಾಡಿದರು.
ಇದೇ ವೇಳೆ ಶಿಥಿಲಗೊಂಡಿರುವ ತಿಗಡಿ ಸೇತುವೆಯ ರಸ್ತೆ ಪರಿಶೀಲಿಸಿದರು.ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ತರ ಊಟೋಪಚಾರ ಪರಿಶೀಲಿಸಿದರು. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.