ಆಗಸ್ಟ್‌ 13ರಂದು ಲಿಂಗೈಕ್ಯ ಮರಿದೇವರ ಶಿವಯೋಗಿಗಳ ಪುಣ್ಯಸ್ಮರಣೆ

KannadaprabhaNewsNetwork | Published : Aug 12, 2024 1:36 AM

ಸಾರಾಂಶ

ಕೆಆರ್‌ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಮಹಾ ರಥೋತ್ಸವಕ್ಕೆ ಚಾಲನೆ ನೀಡುವರು. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಚನ್ನಗಿರಿ ತಾಲೂಕು ಕಮ್ಮತಹಳ್ಳಿ ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಗುರು ನಮನ ನುಡಿಯಲಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಬೇಬಿ ಗ್ರಾಮದಲ್ಲಿ ಆ.13 ರಂದು ದುರ್ದಂಡೇಶ್ವರ ಮಹಾಂತ ಶಿವಯೋಗಿಗಳ ಮಠದ ಲಿಂಗೈಕ್ಯ ಮರಿದೇವರು ಶಿವಯೋಗಿ ಮಹಾಸ್ವಾಮಿಗಳ 16ನೇ ವರ್ಷದ ಪುಣ್ಯಸ್ಮರಣೆ ಹಾಗೂ 8ನೇ ವರ್ಷದ ಮಹಾ ರಥೋತ್ಸವ ನಡೆಯಲಿದೆ.

ಅಂದು ಬೆಳಗ್ಗೆ 8 ಗಂಟೆಗೆ ತಿ.ನರಸೀಪುರ ತಾಲೂಕಿನ ಮದ್ಗಾರಲಿಂಗಯ್ಯ ಹುಂಡಿಯ ವಿರಕ್ತ ಮಠದ ಪೀಠಾಧ್ಯಕ್ಷ ಗೌರಿಶಂಕರ ಸ್ವಾಮಿಗಳು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕೆಆರ್‌ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಮಹಾ ರಥೋತ್ಸವಕ್ಕೆ ಚಾಲನೆ ನೀಡುವರು. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಚನ್ನಗಿರಿ ತಾಲೂಕು ಕಮ್ಮತಹಳ್ಳಿ ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಗುರು ನಮನ ನುಡಿಯಲಿದ್ದಾರೆ.

ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು. ವಾಗ್ಮಿ ಪ್ರೋ.ಕೃಷ್ಣೇಗೌಡ ಅಭಿನಂದನಾ ನುಡಿಗಳನ್ನಾಡುವರು, ಮಹಾಚೇತನ ಶ್ರೀ ಮರಿದೇವರು ಶಿವಯೋಗಿ ಶ್ರೀ ಸ್ಮರಣಾರ್ಥ ‘ಜೀವನದಿ’ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ನೀಡಿ ಗೌರವಿಸುವರು. ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ಉಪಸ್ಥಿತಿ ಇರುವರು.

ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು ಹಿರಿಯ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವರು. ಡಿಎಂಎಸ್ ಜ್ಞಾನಕುಟೀರ ಶಾಲೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಲನಚಿತ್ರ ನಟಿ ತಾರಾ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಅತಿಥಿಗಳಾಗಿ ಮೈ ಷುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಬಿಇಒ ರವಿಕುಮಾರ್, ತಾಲೂಕು ಅಧ್ಯಕ್ಷ ಶಿವಕುಮಾರ್, ಶಿಂಡಬೋಗನಹಳ್ಳಿ ನಾಗಣ್ಣ ಇತರರು ಭಾಗವಹಿಸಲಿದ್ದಾರೆ ಎಂದು ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ ತಿಳಿಸಿದರು.

ರಾತ್ರಿ ಸಾಯಿ ಸಾಂಸ್ಕೃತಿಕ ಕಲಾವೇದಿಕೆ ಮೈಸೂರು ಇವರಿಂದ ನಡೆಯುವ ರಸಮಂಜರಿ ಕಾರ್ಯಕ್ರಮದಲ್ಲಿ ಜೂ.ಮಾಲಾಶ್ರೀ, ಹಾಸ್ಯನಟಿ ರೇಖಾದಾಸ್, ಜೂ.ರಕ್ಷಿತ, ಬೌ, ಬೌ ಬಿರಿಯಾನಿ ಜಯರಾಮಣ್ಣ, ಜೂ.ಅಂಬರೀಶ್, ಜೂ.ಶಂಕರ್‌ನಾಗ್, ಜೂ.ರಾಜ್‌ಕುಮಾರ್ ಇತರರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Share this article