ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ವಿವಿಧ ದಿನಾಂಕಗಳಂದು ತಾಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು. ನ.15ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ, ನ.21ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಹಾಗೂ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ನ.22ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ನ.23ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.