ಅ.೧೭ರಂದು ಕಾವೇರಿ ಪ್ರತಿಮೆಗೆ ಪೂಜೆ, ಅನ್ನಸಂತರ್ಪಣೆ

KannadaprabhaNewsNetwork |  
Published : Oct 16, 2024, 12:41 AM IST
ಕಾವೇರಿ ಪ್ರತಿಮೆಗೆ ಪೂಜೆ | Kannada Prabha

ಸಾರಾಂಶ

ಕಾವೇರಿ ನದಿಗೆ ತನ್ನದೆ ಆದ ಪಾವಿತ್ರ್ಯತೆ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ಪೂಜಾ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಕೆಲವರು ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸಿ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಮತ್ತು ಜನರಿಗೆ ಕಾವೇರಿ ಪಾವಿತ್ರ್ಯತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಅ.೧೭ರಂದು ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯುವ ಪ್ರಯುಕ್ತ ನಗರದ ಕಾವೇರಿ ಉದ್ಯಾನದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಸಂಜೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಪಿ. ರವಿಕುಮಾರ್ ವಹಿಸುವರು. ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಸಮಾರಂಭ ಉದ್ಘಾಟಿಸುವರು ಎಂದರು.

ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ನಗರಸಭೆ ಅಧ್ಯಕ್ಷ ಎಂ.ಬಿ.ಪ್ರಕಾಶ್, ಮುಡಾ ಅಧ್ಯಕ್ಷ ನಯೀಮ್, ನಗರಸಭೆ ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್, ಜಿಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್.ಯೋಗೇಶ್, ಜಿಲ್ಲಾಕಾರಿ ಡಾ. ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಡಿಸಿ ಎಚ್.ಎಲ್.ನಾಗರಾಜು, ಎಎಸ್ಪಿ ಗಂಗಾಧರಸ್ವಾಮಿ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ನದಿ ಸ್ವಚ್ಛಗೊಳಿಸಿ ಆರತಿ ಮಾಡಿ:

ಕಾವೇರಿ ನದಿ ಅಪವಿತ್ರವಾಗಿದ್ದು ಮೊದಲು ನದಿಯನ್ನು ಸ್ವಚ್ಛಗೊಳಿಸಿ ನಂತರ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವುದು ಸೂಕ್ತ. ನಗರ ಪಟ್ಟಣಗಳಿಂದ ಹರಿದುಬರುವ ಕಲುಷಿತ ನೀರು ಕಾವೇರಿ ಒಡಲು ಸೇರುತ್ತಿದೆ. ಇದಕ್ಕೆ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೂ ಸಹ ಕಾರಣರಾಗಿದ್ದಾರೆ. ಮೊದಲು ನಮ್ಮ ಜನರಿಗೆ ಕಾವೇರಿ ಬಗ್ಗೆ ಪೂಜ್ಯ ಭಾವನೆ ಬರಬೇಕು. ನದಿಗೆ ಕಲುಷಿತ ನೀರನ್ನು ಹರಿಸಬಾರದು ಎಂಬ ಅರಿವು ಜನರಲ್ಲಿ ಬಂದಲ್ಲಿ ಮಾತ್ರ ಕಾವೇರಿ ಅಪವಿತ್ರವಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು.

ಕಾವೇರಿ ನದಿಗೆ ತನ್ನದೆ ಆದ ಪಾವಿತ್ರ್ಯತೆ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ಪೂಜಾ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಕೆಲವರು ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸಿ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಮತ್ತು ಜನರಿಗೆ ಕಾವೇರಿ ಪಾವಿತ್ರ್ಯತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಟ್ರಸ್ಟ್ ಸಂಚಾಲಕ ದ.ಕೋ.ಹಳ್ಳಿ ಚಂದ್ರಶೇಖರ್ ತಿಳಿಸಿದರು.

ಟ್ರಸ್ಟ್‌ನ ಪದಾಧಿಕಾರಿಗಳಾದ ಕೆ.ಟಿ.ಜಗದೀಶ್, ಟಿ.ಡಿ. ನಾಗರಾಜು, ಕುಮಾರಗೌಡ, ದೇವೇಗೌಡ ಗೋಷ್ಠಿಯಲ್ಲಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...