24, 25ರಂದು ಎಡಜಿಗಳೇಮನೆ ಸರ್ಕಾರಿ ಶಾಲೆ ಅಮೃತ ಮಹೋತ್ಸವ

KannadaprabhaNewsNetwork |  
Published : Feb 22, 2024, 01:49 AM ISTUpdated : Feb 22, 2024, 02:11 PM IST
ಯು ಟಿ ಖಾದರ್‌ | Kannada Prabha

ಸಾರಾಂಶ

ಸಾಗರ ತಾಲೂಕಿನ ಎಡಜಿಗಳೇಮನೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ ೨೪ ಹಾಗೂ ೨೫ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟನೆ, ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ, ಸಾಗರ

ತಾಲೂಕಿನ ಎಡಜಿಗಳೇಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ ೨೪ ಹಾಗೂ ೨೫ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟನೆ, ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.

ಫೆ.೨೪ರ ಮಧ್ಯಾಹ್ನ ಮೂರು ಗಂಟೆಗೆ ಶ್ರೀ ಶ್ರೀಧರ ಸೇವಾ ಮಹಾಮಂಡಲ ಅಧ್ಯಕ್ಷರಾದ ಎಂ.ಜಿ. ಕೃಷ್ಣಮೂರ್ತಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟಿಸಲಿದ್ದಾರೆ. ರಾಜ್ಯ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. 

ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ವಿ.ನಾ. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತು ಸದಸ್ಯ ಭೋಜೇಗೌಡ, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪ, ಶ್ರೀಧರ ಸೇವಾ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರ ರಾವ್ ಕಾನ್ಲೆ, ಮನೋವೈದ್ಯ ಡಾ. ಕೆ.ಆರ್. ಶ್ರೀಧರ್, ಸಾಮಾಜಿಕ ಚಿಂತಕ ಬಿ.ಆರ್. ಜಯಂತ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಫೆ.೨೫ರಂದು ಬೆಳಗ್ಗೆ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಮೃತ ಮಹೋತ್ಸವ ಉದ್ಘಾಟಿಸಲಿದ್ದಾರೆ. ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಕಂಪ್ಯೂಟರ್ ಕೊಠಡಿ ಉದ್ಘಾಟಿಸಲಿದ್ದಾರೆ.

ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಸ್ಥಳೀಯ ಗ್ರಾಪಂ ಅಧ್ಯಕ್ಷೆ ನಾಗವೇಣಿ ಪ್ರವೀಣ್, ಬಿಇಒ ಪರಶುರಾಮಪ್ಪ ಇ. ಇತರರು ಪಾಲ್ಗೊಳ್ಳಲಿದ್ದಾರೆ. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಜಯಪ್ರಕಾಶ ಮಾವಿನಕುಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಅಮೃತ ಮಹೋತ್ಸವ ಸಂದರ್ಭದಲ್ಲಿ ಗುರುವಂದನೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಶಾಲೆಗೆ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುವ ಸಮಯದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ದಿನೇಶ್ ಕುಮಾರ್ ಎನ್. ಜೋಷಿ ಇತರರು ಇರಲಿದ್ದಾರೆ. 

ಎರಡು ದಿನಗಳ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳ ಎರಡು ಸಮಾವೇಶ ನಡೆಯಲಿದ್ದು, ಸರ್ಕಾರಿ ಶಾಲೆಗಳ ಬೆಳವಣಿಗೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಹಾಗೂ ಸಾರ್ವಜನಿಕರ ಪಾತ್ರ ಕುರಿತಾಗಿ ಚರ್ಚೆ ನಡೆಯಲಿದೆ.

ಸಂಜೆ ಸಮಾರೋಪದಲ್ಲಿ ವಿಧಾನಪರಿಷತ್ತು ಸದಸ್ಯ ಡಿ.ಎಸ್. ಅರುಣ, ಮಾಜಿ ಸಚಿವ ಎಚ್.ಹಾಲಪ್ಪ, ಧರ್ಮಸ್ಥಳ ಗ್ರಾಮೀಣ ಯೋಜನೆ ಯೋಜನಾಧಿಕಾರಿ ಶಾಂತಾ ನಾಯಕ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಕೆ.ಬಿ.ಪ್ರಸನ್ನ ಕುಮಾರ್, ಎಂ.ಸಿ. ಮೃತ್ಯುಂಜಯ ಮಾವಿನಕುಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಕೆ. ವೆಂಕಟೇಶ, ಚಾರ್ಟರ್ ಅಕೌಂಟೆಂಟ್ ಬಿ.ವಿ.ರವೀಂದ್ರನಾಥ ಭಾಗವಹಿಸಲಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲೋಕೇಶ್ ದೊಂಬೆ ಅಧ್ಯಕ್ಷತೆ ವಹಿಸಲಿದ್ದಾರೆ.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ