ಕನ್ನಡಪ್ರಭ ವಾರ್ತೆ ಕಲಬುರಗಿ
ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಸಿಎಂ ಸಿದ್ದರಾಮಯ್ಯನವರಿಗೆ ಆಹ್ವಾನಿಲಾಗುತ್ತಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮತ್ತು ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ ತಿಳಿಸಿದ್ದಾರೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನದಲ್ಲಿ ಸುಮಾರು 450ರಿಂದ 500 ಪ್ರತಿನಿಧಿಗಳು, ಹೂಡಿಕೆದಾರರು ಭಾಗವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಎಪಿಎಂಸಿ, ಜವಳಿ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳು ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆಂದು ತಿಳಿಸಿದರು.ಉದ್ಘಾಟನಾ ಸಮಾವೇಶದ ನಂತರ ತಾಂತ್ರಿಕ ಅಧಿವೇಶನಗಳು ನಡೆಯಲಿದ್ದು ಕೈಗಾರಿಕಾ ನೀತಿ, ಹೂಡಿಕೆದಾರರ ಸಮಾವೇಶ ಮತ್ತು ಬಂಡವಾಳ ಹೂಡಲು ಇರುವ ಅವಕಾಶಗಳು, ಎಪಿಎಂಸಿನಲ್ಲಿನ ಸಮಸ್ಯೆಗಳು, ಕೌಶಲ್ಯ ತರಬೇತಿ ಮತ್ತು ಅವಕಾಶಗಳು ಇನ್ನೂ ಇತರ ವಿಷಯಗಳ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು ಈ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆಂದರು.
ಎಪಿಎಂಸಿ ಡಿಜೀಯಲೀಕರಣ ಶಉರು ಮಾಡಬೇಕು. ವರ್ತಕರಿಗೆ ಪಾರದರ್ಶಕವಾಗಿ ಅವರವರ ವಹಿವಾಟು ನಡೆಸಲು ಅನುಕೂಲ ಕಲ್ಪಿಸಬಕು. ಇದಕ್ಕೆ ತಾವು ಮತ್ತೊಮ್ಮೆ ಸರಕಾರದ ಗಮನ ಸೆಳೆಯೋದಾಗಿ ಲಹೋಟಿ ಹೇಳಿದರು.
ಈ ಸಮ್ಮೇಳನದ ಅಧಿವೇಶನದಲ್ಲಿ ನಡೆಯುವ ಚರ್ಚೆಗಳ ಕುರಿತ ಸಮಸ್ಯೆಗಳು ಮತ್ತು ಪರಿಹಾರಗಳನ್ನು ಕ್ರೋಢೀಕರಿಸಿ, ವರದಿಯನ್ನು ತಯಾರಿಸಿ ಸರ್ಕಾರದ ಗಮನಕ್ಕೆ ತಂದು ಮುಖ್ಯಮಂತ್ರಿಗಳು, ಜಿಲ್ಲೆಯ ಉಸ್ತುವಾರಿ ಸಚಿವರು, ಕೈಗಾರಿಕಾ ಸಚಿವರು ಮತ್ತು ಜಿಲ್ಲೆಯ ಶಾಸಕರುಗಳೊಂದಿಗೆ ಚರ್ಚಿಸಲಿದ್ದೇವೆಂದರು. ಶರಣು ಪಪ್ಪಾ ಸೇರಿದಂತೆ ಅನೇಕರು ಇದ್ದರು.