ಕನ್ನಡಪ್ರಭ ವಾರ್ತೆ ಮಂಡ್ಯ
ಉದ್ಘಾಟನೆಯನ್ನು ಮಾಜಿ ಸಚಿವ ಎಚ್.ಎಂ.ರೇವಣ್ಣ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಮಾಜಿ ಅಧಕ್ಷ ಕೆ.ಎಚ್.ನಾಗರಾಜು, ವಕೀಲ ಬಿ.ಜೆ.ವಿಜಯಕುಮಾರ್ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
೩ ಗಂಟೆಗೆ ನಡೆಯುವ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಎಚ್.ಎಲ್.ಮಹದೇವ ವಹಿಸುವರು. ನಿವೃತ್ತ ಪ್ರಾಧ್ಯಾಫಕ ಡಾ.ಎನ್.ಎಸ್.ರಂಗರಾಜು ಮೈಸೂರು ಚಲೋ ಚಳವಳಿ: ಐತಿಹಾಸಿಕ ಮಹತ್ವ ಕುರಿತು ವಿಷಯ ಮಂಡಿಸುವರು. ವಕೀಲ ಬೀರಹಳ್ಳಿ ರಮೇಶಗೌಡ ಅವರು ಟಿ.ಮರಿಯಪ್ಪ: ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆ ಕುರಿತು ವಿಷಯ ಮಂಡಿಸಲಿದ್ದಾರೆ ಎಂದು ನುಡಿದರು.ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಎಚ್.ವಿಶ್ವನಾಥ್ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ವಿಧಾನಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ವಹಿಸುವರು. ಆರ್‌ಟಿಒ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಅವರು ಟಿ.ಮರಿಯಪ್ಪ ಭಾವಚಿತ್ರ ಅನಾವರಣಗೊಳಿಸುವರು. ಕಿ.ಮರಿಯಪ್ಪ ಸುಪುತ್ರ ಟಿ.ಎಂ.ರಾಜಕುಮಾರ್ ಅವರನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅಭಿನಂದಿಸುವರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮದ್ದೂರು: ಪಟ್ಟಣದ ಐಶ್ವರ್ಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ.ಜೆ.ನಂದೀಶ್ ಅವರನ್ನು ಸೆನೆಟ್ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.
ಸೆನೆಟ್ ಸದಸ್ಯರಾಗಿ ಆಯ್ಕೆಯಾಗಿರುವ ಜೆ.ನಂದೀಶ್ ಅವರನ್ನು ಐಶ್ವರ್ಯ ವಿದ್ಯಾಸಂಸ್ಥೆ ಅಧ್ಯಕ್ಷರು, ನಿರ್ದೇಶಕರು, ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿ ಅಭಿನಂದಿಸಿ ಗೌರವಿಸಿದ್ದಾರೆ.
ಮಂಡ್ಯ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆ ಮಹಿಳೆಯರಿಗೆ ಮೀಸಲಿರುವ ಕದಳಿ ವೇದಿಕೆಗೆ ಜಿಲ್ಲಾಧ್ಯಕ್ಷರಾಗಿ ಬಿ.ಎಸ್. ಪದ್ಮ ಅವರನ್ನು ರಾಜ್ಯಾಧ್ಯಕ್ಷ ಡಾ.ಸಿ. ಸೋಮಶೇಖರ್ ಹಾಗೂ ರಾಜ್ಯ ಕದಳಿ ವೇದಿಕೆಯ ಸಂಚಾಲಕಿ ಸುಶೀಲಾ ಸೋಮಶೇಖರ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎಸ್. ಶಿವಪ್ರಕಾಶ್ ಅವರು ಒಮ್ಮತದಿಂದ ಆಯ್ಕೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ತಾಲೂಕಿನ ತಗ್ಗಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅ.22 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.