ಜೂ.2ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ, ನಿವೃತ್ತರಿಗೆ ಸನ್ಮಾನ

KannadaprabhaNewsNetwork |  
Published : May 17, 2024, 12:38 AM IST
ಹೊನ್ನಾಳಿ ಫೋಟೋ 16ಎಚ್.ಎಲ್.ಐ1.    ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಂದು ಹಮ್ಮಿಕೊಂಡಿದ್ದ ಪಂಚಮಸಾಲಿ ಸಮಾಜದ  ಪೂರ್ವಬಾವಿ  ಸಭೆಯ.  ಅಧ್ಯಕ್ಷತೆ ವಹಿಸಿ ತಾಲೂಕು ಆದ್ಯಕ್ಷ ಬೆನಕನಹಳ್ಳಿ ವೀರಣ್ಣ ಮಾತನಾಡಿದರು. | Kannada Prabha

ಸಾರಾಂಶ

ಹೊನ್ನಾಳಿ ತಾಲೂಕು ಪಂಚಮಸಾಲಿ ಸಮಾಜವು ಜೂನ್ 2ರಂದು ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‍ಎಸ್‍ಎಲ್‍ಸಿ- ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕನ್ನಡ ಪ್ರಭ ವಾರ್ತೆ ಹೊನ್ನಾಳಿ

ತಾಲೂಕು ಪಂಚಮಸಾಲಿ ಸಮಾಜವು ಜೂನ್ 2ರಂದು ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‍ಎಸ್‍ಎಲ್‍ಸಿ- ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾರಂಭಕ್ಕೆ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ, ಪೀಠದ ಧರ್ಮದರ್ಶಿ ಬಿ.ಸಿ. ಉಮಾಪತಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಪಂಚಮಸಾಲಿ ರಾಜ್ಯ ಕಾರ್ಯಾಧ್ಯಕ್ಷ ಸೋಮನಗೌಡ, ರಾಜ್ಯ ಗಡಿನಾಡು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಶೇ.60ಕ್ಕೂ ಹೆಚ್ಚು ಅಂಕ ಪಡೆದವರು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು ಎಂದರು.

ಸಮಾರಂಭದಲ್ಲಿ ಪೀಠದ ಆಡಳಿತಾಧಿಕಾರಿ ಡಾ.ರಾಜಕುಮಾರ, ಪಟ್ಟಣಶೆಟ್ಟಿ ಪರಮೇಶ, ಕುಂಕೋದ ಸೋಮಣ್ಣ, ಕುಂಕೋದ್ ಹಾಲೇಶ, ಚನ್ನಮುಂಬಾಪುರದ ಚಂದ್ರಶೇಖರ, ಒಡೆಯರ ಹತ್ತೂರು ಅಶೋಕ್ ಮಾತನಾಡಿದರು.

ಪೇಟಿ ಮಲ್ಲೇಶ್ ಮಠ, ಬಸಣ್ಣ ಮೆಕ್ಕೆಜೋಳ ಚನ್ನೇಶ, ಕೆ.ವಿ. ಪ್ರಸನ್ನ, ಮೃತ್ಯುಂಜಯ ಪಾಟೀಲ್, ಪಲ್ಲವಿ ರಾಜು, ಗಮಕಿ ವಿಶ್ವಣ್ಣ, ದಿವಾಕರ್, ಪಿ.ವಿಜಯ್, ಹೋಟೆಲ್‌ ಗಿರಿ, ಮಲ್ಲೂರು ರಾಜು, ಗಿರೀಶ್ ನಾಡಿಗ್, ಮಹಿಳಾ ಸದಸ್ಯರಾದ ಶಿಲ್ಪಾ ರಾಜುಗೌಡ, ಶಶಿ ದಿವಾಕರ್, ಸುಮಾ ರವಿ, ಕೋಮಲಾ ನಾಡಿಗ್ ಇತರರು ಇದ್ದರು.

- - - -16ಎಚ್.ಎಲ್.ಐ1:

ಹೊನ್ನಾಳಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗುರುವಾರ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ