ಮಾರ್ಚ್ 12 ರಂದು ಹೆಗ್ಗವಾಡಿಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಒಂದನೇ ವರ್ಷದ ಪುಣ್ಯ ಸ್ಮರಣೆ

KannadaprabhaNewsNetwork |  
Published : Mar 02, 2024, 01:47 AM IST
55 | Kannada Prabha

ಸಾರಾಂಶ

ನನ್ನ ತಂದೆ ಕುಟುಂಬಕ್ಕಿಂತಲೂ ಹೆಚ್ಚಾಗಿ ಕಾರ್ಯಕರ್ತರೊಂದಿಗೆ ಕಾಲ ಕಳೆದಿದ್ದೇ ಹೆಚ್ಚಾಗಿದೆ. ಆದ್ದರಿಂದಲೇ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ನನ್ನ ತಂದೆಯ ಮೇಲೆ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದರು. ನನಗೆ ಶಾಸಕ ಸ್ಥಾನದ ಜೊತೆಗೆ ನನ್ನ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿಯಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ ಆರ್. ಧ್ರುವನಾರಾಯಣ್ ಅವರು ನಿಧನರಾಗಿ ಒಂದು ವರ್ಷ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಮಾ. 12 ರಂದು ಸ್ವಗ್ರಾಮ ಹೆಗ್ಗವಾಡಿಯಲ್ಲಿ ಮೊದಲನೆ ವರ್ಷದ ಪುಣ್ಯಸ್ಮರಣೆ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಪಟ್ಟಣ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನನ್ನ ತಂದೆ ಕುಟುಂಬಕ್ಕಿಂತಲೂ ಹೆಚ್ಚಾಗಿ ಕಾರ್ಯಕರ್ತರೊಂದಿಗೆ ಕಾಲ ಕಳೆದಿದ್ದೇ ಹೆಚ್ಚಾಗಿದೆ. ಆದ್ದರಿಂದಲೇ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ನನ್ನ ತಂದೆಯ ಮೇಲೆ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದರು. ನನಗೆ ಶಾಸಕ ಸ್ಥಾನದ ಜೊತೆಗೆ ನನ್ನ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿಯಿದೆ. ಈ ಜವಾಬ್ದಾರಿಯನ್ನು ನಿಭಾಯಿಸಲು ನನ್ನ ತಂದೆ ದೈಹಿಕವಾಗಿ ನಮ್ಮನ್ನು ಅಗಲಿದ್ದರೂ ಸಹ ಈಗಲೂ ನನ್ನ ಬೆನ್ನಿಗೆ ನಿಂತು ಪ್ರೇರಕ ಶಕ್ತಿಯಾಗಿ ಹೆಜ್ಜೆ ಹಾಕಿ ನಡೆಸಿಕೊಂಡು ಹೋಗುವಂತೆ ನನಗೆ ಭಾಸವಾಗುತ್ತಿದ್ದು. ಅಭಿಮಾನಿಗಳ ಆ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರ ಸ್ಥಾನವನ್ನು ತುಂಬಲು ನಾನು ಪ್ರಾಮಾಣಿಕ ಪ್ರಯತ್ನವನ್ನು ನಡೆಸುತ್ತಿದ್ದೇನೆ ಎಂದರು.

ಮಾ. 11ರಂದು ನನ್ನ ತಂದೆ ಅಗಲಿ ಒಂದು ವರ್ಷ ಕಳೆಯುತ್ತಿದೆ. ಅವರ ಸೇವಾ ಮನೋಭಾವನೆಯನ್ನು ಉಳಿಸಕೊಳ್ಳುವ ಸಲುವಾಗಿ ಮಾ. 11ರಂದು ಚಾಮರಾಜನಗರ-ಮೈಸೂರು ಜಿಲ್ಲೆಯ ಎಲ್ಲ 8 ಕ್ಷೇತ್ರಗಳಲ್ಲಿ ಸೇವಾ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಮಾ. 12 ರಂದು ಅವರು ಪ್ರಕೃತಿಯಲ್ಲಿ ಲೀನವಾದ ಹಿನ್ನೆಲೆ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಎರಡು ಜಿಲ್ಲೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಬೃಹತ್ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ವೆಂಕಟೇಶ್, 8 ಕ್ಷೇತ್ರಗಳ ಶಾಸಕರು ಸೇರಿದಂತೆ ನನ್ನ ತಂದೆಯ ಜೊತೆಗೆ ಒಡನಾಟ ಹೊಂದಿದ್ದಂತಹ ಶಾಸಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ 8 ಕ್ಷೇತ್ರಗಳ ಮುಖಂಡರು ಜವಾಬ್ದಾರಿಯನ್ನು ವಹಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಕರೆತರುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಿ. ಸೋಮಶೇಖರ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಚ್.ಸಿ. ಬಸವರಾಜು, ವಿಶ್ವಕರ್ಮ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಸಿ.ಎಂ. ಶಂಕರ್, ಶ್ರೀಕಂಠನಾಯಕ, ರಂಗಸ್ವಾಮಿ, ವಿಧಾನಸಭಾ ಉಸ್ತುವಾರಿ ಸೋಮೇಶ್, ಮುಖಂಡರಾದ ಕಾವೇರಪ್ಪ, ಬಿ.ಕೆ. ರವಿಕುಮಾರ್, ಪ್ರದೀಪ್, ರಾಜೇಶ್, ಎಂ. ಮಾದಪ್ಪ, ಮುದ್ದಮಾದಶೆಟ್ಟಿ, ವಿಜಯ್ ಕುಮಾರ್, ಶ್ರೀನಿವಾಸಮೂರ್ತಿ, ಎನ್.ಎಂ. ಮಂಜುನಾಥ್, ಕುಳ್ಳಯ್ಯ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಜಿಪಂ ಮಾಜಿ ಸದಸ್ಯೆ ಲತಾಸಿದ್ದಶೆಟ್ಟಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ನಗರಸಭಾ ಸದಸ್ಯರಾದ ಮಹೇಶ್, ಗಾಯತ್ರಿ, ಶ್ರೀಕಂಠಸ್ವಾಮಿ, ಕೆ.ಎಂ. ಬಸವರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಲೆ ಏರಿಸಿ ಜನರ ಜೇಬಿಗೆ ಕೇಂದ್ರ ಕನ್ನ: ಕೈ ಟೀಕೆ
ನಾನು ಸಾಲರಾಮಯ್ಯ ಅಲ್ಲ : ಸಿದ್ದರಾಮಯ್ಯ ತಿರುಗೇಟು