ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಆರಂಭ । ಸಿ.ಜೆ. ಗಂಗಾಧರ ಉದ್ಘಾಟನೆಕನ್ನಡಪ್ರಭ ವಾರ್ತೆ ಪುತ್ತೂರು
ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್‌ಸ್ಟ್ರಕ್ಷನ್, ಎ.ವಿ.ಜಿ. ಇಂಗ್ಲಿಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಸೆ.೨೯ರಂದು ಲೋಕಾರ್ಪಣೆಗೊಳಲಿದೆ ಎಂದು ಸೊಸೈಟಿ ಅಧ್ಯಕ್ಷ ವೆಂಕಟ್ರಮಣ ಕಳುವಾಜೆ ತಿಳಿಸಿದ್ದಾರೆ.ಅವರು ಶನಿವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಭದ್ರ ಭಾರತಕ್ಕಾಗಿ ಸಮರ್ಥ ಸಹಕಾರಿ ಸಂಸ್ಥೆ ಎಂಬ ನಂಬಿಕೆಯೊಂದಿಗೆ ಲೋಕಾರ್ಪಣೆ ಮಾಡಲಾಗುತ್ತಿದ್ದು, ಅಂದು ಸೊಸೈಟಿಯ ಕಚೇರಿ ಕಟ್ಟಡದಲ್ಲಿ ಬೆಳಗ್ಗೆ ಗಣಹೋಮ, ದೇವತಾ ಪ್ರಾರ್ಥನೆಯೊಂದಿಗೆ ಲೋಕಾರ್ಪಣೆಗೊಳ್ಳಲಿದೆ. ಬಳಿಕ ಕಚೇರಿಯ ಉದ್ಘಾಟನೆ ಕಾರ್ಯಗಳು ನಡೆಯಲಿದ್ದು, ಬೆಂಗಳೂರಿನ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜೆ. ಗಂಗಾಧರ ಅವರು ಕಚೇರಿಯ ಉದ್ಘಾಟನೆ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಭದ್ರತಾ ಕೋಶದ ಉದ್ಘಾಟನೆ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು ಗಣಕಯಂತ್ರದ ಉದ್ಘಾಟನೆ ಮತ್ತು ಮಂಗಳೂರಿನ ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಭಾಸ್ಕರ ದೇವಸ್ಯ ಅಧ್ಯಕ್ಷರ ಕೊಠಡಿಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.ಆ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಲಿದ್ದಾರೆ. ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪ್ರಥಮ ಸಾಲ ಪತ್ರ ವಿತರಣೆ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್., ಪ್ರಥಮ ಠೇವಣಿ ಪತ್ರ ವಿತರಣೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರು ಸಂಸ್ಥೆಯ ಲೋಗೋ ಅನಾವರಣಗೊಳಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ರಾಜ್ಯ ಸೌಹಾರ್ದ ಸಹಕಾರದ ನಿರ್ದೇಶಕಿ ಭಾರತಿ ಜಿ. ಭಟ್, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಚಿದಾನಂದ ಬೈಲಾಡಿ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ರವಿ ಮುಂಗ್ಲಿಮನೆ, ಪುತ್ತೂರು ತಾಲೂಕು ಬಂಟರ ಸಂಘ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮತ್ತು ಪುತ್ತೂರು ತಾಲೂಕು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷ ಉಮೇಶ ಮಳುವೇಲು, ಮುಖ್ಯ ಪ್ರವರ್ತಕ ಎ.ವಿ. ನಾರಾಯಣ, ಸೀತಾರಾಮ ಕೇವಳ, ಗುಡ್ಡಪ್ಪ ಗೌಡ ಬಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಕಾಂತಿಲ, ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ನಿರ್ದೇಶಕಿ ಪ್ರತಿಭಾದೇವಿ ಉಪಸ್ಥಿತರಿದ್ದರು.