ಒನಕೆ ಓಬವ್ವನ ಧೈರ್ಯ, ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ

KannadaprabhaNewsNetwork |  
Published : Nov 11, 2024, 11:52 PM IST
ಕ್ಯಾಪ್ಷನ 11ಕೆಡಿವಿಜಿ32 ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಉದ್ಘಾಟಿಸಿದರು. ....ಕ್ಯಾಪ್ಷನ 11ಕೆಡಿವಿಜಿ33 ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಡಿಸಿ, ಗಣ್ಯರು ಓಬವ್ವನ ಮೂರ್ತಿಗೆ ಪುಷ್ಪ ಅರ್ಪಿಸಿದರು. | Kannada Prabha

ಸಾರಾಂಶ

ತುಂಗಾಭದ್ರ ಸಭಾಂಗಣದಲ್ಲಿ ನಡೆದ ಒಬವ್ವ ಜಯಂತಿ ಆಚರಣೆಯಲ್ಲಿ ಡಿಸಿ ಜಿ.ಎಂ. ಗಂಗಾಧರ್‌ಸ್ವಾಮಿ

ಕನ್ನಡಪ್ರಭ ವಾರ್ತೆ ದಾವಣಗೆರೆ

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ಜಿಲ್ಲಾಡಳಿತ ತುಂಗಾಭದ್ರ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ದಾವಣಗೆರೆ ಇವರ ಆಶ್ರಯದಲ್ಲಿ ನಡೆದ ವೀರವನಿತೆ ಒನಿಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶ, ಸಮಾಜ ಹಾಗೂ ರಾಜ್ಯಕ್ಕಾಗಿ ಯಾರು ತ್ಯಾಗ ಮಾಡುತ್ತಾರೆ, ಅಂತಹವರು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯುತ್ತಾರೆ. ಈ ಹಿನ್ನಲೆಯಲ್ಲಿ ನಮ್ಮ ದೇಶಕ್ಕೆ ಇರುವಂತಹ ಮಹತ್ವ ಇನ್ನೊಂದು ದೇಶಕ್ಕಿಲ್ಲ ಎಂದು ಹೇಳಿದರು.

ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ ದೇವಿ, ಗಾಂಧೀಜಿ, ನೆಹರು, ಬಾಬಾ ಸಾಹೇಬ್ ಅಂಬೇಡ್ಕರ್ ರಂತಹ ಮಹಾನೀಯರು ತಮಗಾಗಿ ಕೆಲಸ ಮಾಡದೆ, ದೇಶ ಹಾಗೂ ಸಮಾಜಕ್ಕಾಗಿ ದುಡಿದಿ ಕಾರಣ ಇತಿಹಾಸ ಪುಟಗಳಲ್ಲಿ ಅಜಾರಮರವಾಗಿ ಉಳಿದಿದ್ದಾರೆ. ಅದೇ ರೀತಿ ನಾವು ಸಮಾಜದ ಒಳಿತಿಗಾಗಿ ಕೆಲಸ ಮಾಡಿದಾಗ ಮಾತ್ರ ಇತಿಹಾಸ ಪುಟಗಳಲ್ಲಿ ಸೇರಲು ಸಾಧ್ಯ ಎಂದ ಅವರು, ಹೆಣ್ಣು ಮಕ್ಕಳು ಒನಕೆ ಓಬವ್ವನ ಧೈರ್ಯ, ಶೌರ್ಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಛಲವಾದಿ ಸಮಾಜದ ಮುಖಂಡರಾದ ಎಂ.ಸಿ.ಓಂಕಾರಪ್ಪ ಅವರು ಒನಕೆ ಓಬವ್ವನ ತ್ಯಾಗ, ಧೈರ್ಯ, ಸ್ವಾಮಿ ನಿಷ್ಠೆ ಬಗ್ಗೆ ಉಪನ್ಯಾಸ ನೀಡಿದರು.

ಮಹಾನಗರ ಪಾಲಿಕೆ ಮಹಾಪೌರ ಕೆ.ಚಮನ್ ಸಾಬ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್, ಎಂ.ಸಂತೋಷ್, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ದೂಡ ಸದಸ್ಯ ಗಿರೀಶ್, ಉಪ ಮೇಯರ್ ಸೋಗಿ ಶಾಂತಕುಮಾರ್, ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಮಹಾಸಭಾ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್.ರುದ್ರಮುನಿ ಸಮಾಜದ ಮುಖಂಡ ಜಯಪ್ರಕಾಶ್, ಉಪಾಧ್ಯಕ್ಷರಾದ ರುದ್ರಮ್ಮ, ಜಿಲ್ಲಾ ಮಾದಿಗ ಸಮಾಜದ ಮುಖಂಡ ಬಿ.ಎಚ್.ವೀರಭದ್ರಪ್ಪ ಹಾಗೂ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ