ಲಕ್ಷ್ಮೇಶ್ವರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ನಿಮ್ಮ ಮತ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿ ಬಹುಮತದಿಂದ ಆರಿಸಿ ಕಳಿಸಬೇಕು ಎಂದು ಸಂಸದ ಪ್ರತಾಪ ಸಿಂಹ ಮನವಿ ಮಾಡಿದರು.
ಸೋಮವಾರ ಪಟ್ಟಣದ ಶಿಗ್ಲಿ ಕ್ರಾಸ್ ಮೂಲಕ ರೋಡ್ ಶೋ ಆರಂಭಿಸಿದ ಅವರು ಸೋಮೇಶ್ವರ ಪಾದಗಟ್ಟಿಯ ಹತ್ತಿರ ನೆರೆದಿದ್ದ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು.ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಬ್ ಕಿ ಬಾರ್ ಚಾರ್ ಸೌ ಪಾರ್ ಎಂಬ ಘೋಷಣೆ ಮೊಳಗಿಸುವ ಮೂಲಕ ತಮ್ಮ ಬೆಂಬಲ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವ ಕಾರ್ಯ ನೀವು ಮಾಡಿದಲ್ಲಿ ಅವರು ಕೇವಲ ಸಂಸದರಾಗಿ ಉಳಿಯುವುದಿಲ್ಲ, ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ, ನೀರಾವರಿ ಯೋಜನೆಗಳನ್ನು ತರುವ ಮೂಲಕ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆಯಲು ಅವಕಾಶ ಮಾಡಿಕೊಡುವ ಕಾರ್ಯ ನಿಮ್ಮಿಂದಾಗಬೇಕು ಎಂದರು.
ರೋಡ್ ಶೋ ನಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಶಾಸಕ ಡಾ. ಚಂದ್ರು ಲಮಾಣಿ, ಸುನೀಲ ಮಹಾಂತಶೆಟ್ಟರ, ಶಿವಪ್ರಕಾಶ್ ಮಹಾಜನಶೆಟ್ಟರ, ವಿಜಯ ಕುಂಬಾರ, ಶಕ್ತಿ ಕತ್ತಿ, ದುಂಡೇಶ ಕೊಟಗಿ, ಸುನೀಲ ಹಿರೇಮಠ, ಅನಿಲ ಮುಳಗುಂದ, ಬಸವರಾಜ ಪಲ್ಲೇದ, ಎಂ.ಎಸ್. ದೊಡ್ಡಗೌಡರ, ಅಶೋಕ ಬಟಗುರ್ಕಿ, ಪೂರ್ಣಿಮಾ ಪಾಟೀಲ, ಅಶ್ವಿನಿ ಅಂಕಲಕೋಟಿ, ಶಿವಯೋಗಿ ಅಂಕಲಕೋಟಿ, ವಾಣಿ ಹತ್ತಿ, ಕವಿತಾ ಶೆರಸೂರಿ ಸೇರಿದಂತೆ ಅನೇಕರು ಇದ್ದರುರೋಡ್ ಶೋ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೂದಪೀರಾ ದರ್ಗಾದ ಹತ್ತಿರ ಬಂದು ಮುಕ್ತಾಯಗೊಂಡಿತು.