ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಒಬ್ಬನ ಬಂಧನ

KannadaprabhaNewsNetwork |  
Published : May 10, 2025, 01:10 AM ISTUpdated : May 10, 2025, 01:26 PM IST
9ಕೆಎಂಎನ್‌ಡಿ-5ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಯುವಕನ ಬಂಧನಕ್ಕೆ ಆಗ್ರಹಿಸಿ ಕಿರುಗಾವಲು ಪೊಲೀಸ್‌ ಠಾಣೆ ಎದುರು ಹಿಂದೂಪರ ಸಂಘಟನೆಯವರು ನೆರೆದಿರುವುದು. | Kannada Prabha

ಸಾರಾಂಶ

ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಫೇಸ್‌ಬುಕ್‌ನಲ್ಲಿ ಪೊಸ್ಟ್ ಹಾಕಿರುವುದರಿಂದ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ,

 ಮಳವಳ್ಳಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿದ ಯುವಕನನ್ನು ತಾಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಎಂಬ ಯುವಕ ಬಂಧಿತ ಆರೋಪಿಯಾಗಿದ್ದು, ಮೇ 8ರಂದು ಎಐ ತಂತ್ರಜ್ಞಾನ ಬಳಸಿ ಪ್ರಧಾನಿ ನರೇಂದ್ರಮೋದಿ ವಿರುದ್ದ ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ.

ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಫೇಸ್‌ಬುಕ್‌ನಲ್ಲಿ ಪೊಸ್ಟ್ ಹಾಕಿರುವುದರಿಂದ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್ ಡಿ.ರವಿಕುಮಾರ್ ಅವರ ನೇತೃತ್ವದಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಜಾವೀದ್ ಪಾಷನನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆ ಬಿಎನ್‌ಎಸ್ 2023(152.192,340 ಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಜಾವೀದ್ ವಿರುದ್ಧ ದೇಶ ದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಘೋಷಣೆಗಳನ್ನು ಕೂಗಿ ಒತ್ತಾಯಿಸಿದರು.

ಪೋಸ್ಟ್‌ನಲ್ಲಿ ಏನಿತ್ತು?

ಭಾರತ - ಪಾಕಿಸ್ತಾನದ ನಡುವೆ ಯುದ್ಧ ಸನ್ನಿವೇಶದಲ್ಲಿ ಮಂಡ್ಯದ ಕಿರುಗಾವಲು ಪೊಲೀಸ್‌ ಠಾಣೆ ವ್ಯಾಪ್ತಿಯ ಜಾವೆದ್ ಎಐ ತಂತ್ರಜ್ಞಾನ ಬಳಸಿ ಪ್ರಧಾನಿ ಮೋದಿ ಅವರು ಇಮ್ರಾನ್ ಖಾನ್ ಕಾಲು ಹಿಡಿಯುತ್ತಿರುವ ರೀತಿ ಫೋಟೋ. ಮೋದಿ ಇಮ್ರಾನ್ ಖಾನ್ ಶೂ ಬಿಚ್ಚುವ ರೀತಿ ಫೋಟೋ ಕ್ರಿಯೇಟ್ ಮಾಡಿದ್ದನು.

ಬಿಜೆಪಿ ಆಕ್ರೋಶ

ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಜಾವೇದ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲವೆಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಿರುಗಾವಲು ಪೊಲೀಸ್‌ ಠಾಣೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಈಗ ಅವನನ್ನು ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ಬಳಿಕ ಎಫ್‌ಐಆರ್‌ ದಾಖಲಿಸಲಾಗುವುದು ಎಂದಾಗ ಈ ಕೂಡಲೇ ಎಫ್‌ಐಆರ್‌ ದಾಖಲಿಸುವಂತೆ ಒತ್ತಾಯಿಸಿದರು. ನಂತರ ಜಿಲ್ಲಾ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೂಚನೆಯಂತೆ ಬಿಜೆಪಿ ಕಾರ್ಯಕರ್ತರು ನೀಡಿದ ದೂರಿನನ್ವಯ ವಿಚಾರಣೆ ನಡೆಸಿ ನಂತರ ಬಂಧನಕ್ಕೆ ಒಳಪಡಿಸಿದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ