ಕನ್ನಡಪ್ರಭ ವಾರ್ತೆ ಸಕಲೇಶಪುರ
ತಾಲೂಕಿನ ಹೊರವಲಯದ ಆನೆಮಹಲ್ ಗ್ರಾಮದ ಬಡಾವಣೆಯೊಂದರಲ್ಲಿ ಹಸೈನಾರ್ ಆಲಿಯಾಸ್ ಹ್ಯಾರೀಸ್ ಸಹಚರರು ಕಾರೊಂದರಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡುವಾಗ ಪ್ರಜ್ವಲ್ ಎಂಬುವನನ್ನು ಪೊಲೀಸರು ಬಂಧಿಸಿದ್ದು , ಹಸೈನಾರ್, ಶೋಯಬ್ ಪರಾರಿಯಾಗಿರುತ್ತಾರೆ. ಆರೋಪಿಗಳು ಕಾರಿನಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸಕಲೇಶಪುರ ನಗರ ಠಾಣೆಯ ಇನ್ಸ್‌ಪೆಕ್ಟರ್ ಎಂ.ಜಗದೀಶ್ ಅವರ ತಂಡ ದಾಳಿ ಮಾಡಿ ಸುಮಾರು ೭೫೦ ಗ್ರಾಂ ಗಾಂಜಾವನ್ನು ವಶಪಡಿಸಿ ಒಬ್ಬ ಆರೋಪಿಯನ್ನು ಬಂಧಿಸಿರುತ್ತಾರೆ.
ದಾಳಿಯಲ್ಲಿ ಇನ್ಸ್‌ಪೆಕ್ಟರ್ ಎಂ.ಜಗದೀಶ್, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಮತ್ತು ಕ್ರೈಂ ಸಿಬ್ಬಂದಿಯಾದ ಪೃಥ್ವಿ, ಶ್ರೀಧರ್, ಚಾಲಕ ಮಧು, ಅಬಕಾರಿ ಇನ್ಸ್‌ಪೆಕ್ಟರ್ ವೆಂಕಟೇಶ್ ಸೇರಿದಂತೆ ಮುಂತಾದವರು ಹಾಜರಿದ್ದರು.