ನಿರಂತರ ಪ್ರಯತ್ನದಿಂದ ಹೆಸರು ಗಳಿಸಲು ಸಾಧ್ಯ: ಸೂರಿ ಶ್ರೀನಿವಾಸ್

KannadaprabhaNewsNetwork |  
Published : Nov 29, 2023, 01:15 AM IST
ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆ ಪ್ರಾಯೋಗಿಕ ಪ್ರೌಢಶಾಲೆ ಸಹಯೋಗದಲ್ಲಿ ಮಂಗಳವಾರ ಬಿಇಡಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರ ಮಟ್ಟದ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧೆಯನ್ನು ಸೂರಿ ಶ್ರೀನಿವಾಸ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ನಿರಂತರ ಪ್ರಯತ್ನದಿಂದ ಹೆಸರು ಗಳಿಸಲು ಸಾಧ್ಯ: ಸೂರಿ ಶ್ರೀನಿವಾಸ್ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧೆ

ಎಂಇಎಸ್‌ನಲ್ಲಿ ನಗರ ಮಟ್ಟದ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯ ಜೊತೆಗೆ ಚರ್ಚಾ ಸ್ಪರ್ಧೆಗಳಲ್ಲಿ ಹೆಚ್ಚು ಮುತುವರ್ಜಿ ಭಾಗವಹಿಸಿದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ಜ್ಯೋತಿನಗರ ಸಮೀಪದ ಮಲೆನಾಡು ವಿದ್ಯಾಸಂಸ್ಥೆ ಪ್ರಾಯೋಗಿಕ ಪ್ರೌಢಶಾಲೆ ಸಹಯೋಗದಲ್ಲಿ ಮಂಗಳವಾರ ಬಿಇಡಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರ ಮಟ್ಟದ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಚರ್ಚಾ ಸ್ಪರ್ಧೆ ಸೇರಿದಂತೆ ಬೇರ್‍ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಕೇವಲ ಬಹುಮಾನಕ್ಕೆ ಮಾತ್ರ ಸೀಮಿತರಾಗ ಕೂಡದು. ಸ್ಪರ್ಧೆಗಳಲ್ಲಿ ಪಡೆದುಕೊಂಡ ಅನುಭವ ಹಾಗೂ ತಿಳಿಯದ ಪ್ರಶ್ನೆಗಳ ಕಲಿಕೆಗೆ ಅನುಕೂಲವಾಗಲಿದ್ದು ಹೆಚ್ಚು ಆಸಕ್ತಿಯಿಂದ ಪಾಲ್ಗೊಂಡು ಯಶಸ್ಸು ಗಳಿಸಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಚರ್ಚಾ ಸ್ಪರ್ಧೆ ವಿಷಯಗಳ ಬಗ್ಗೆ ಹೆಚ್ಚು ಅಭ್ಯಾಸಿಸಬೇಕು. ಇದರಿಂದ ಭವಿಷ್ಯದಲ್ಲಿ ಎಂತಹ ಸವಾಲುಗಳು ಬಂದರೂ ಎದುರಿಸುವ ಆತ್ಮಸ್ಥೈರ್ಯ ಮೂಡಲಿದೆ ಎಂದರು. ಒಂದು ಕಲ್ಲು ಹಲವಾರು ಏಟುಗಳು ತಿಂದು ವಿಗ್ರಹವಾಗುವ ರೀತಿಯಲ್ಲಿ ವಿದ್ಯಾರ್ಥಿಗಳು ಶತತ ಪ್ರಯತ್ನದಿಂದ ಮಾತ್ರ ಉತ್ತಮ ಹೆಸರು ಸಂಪಾದಿಸಬಹುದು ಎಂದರು. ನವೆಂಬರ್ ತಿಂಗಳು ಮಾತ್ರ ಕನ್ನಡಾಭಿಮಾನ ತೋರುವ ತಿಂಗಳಾಗದೇ ಬರವಣಿಗೆ, ಕನ್ನಡ ಪುಸ್ತಕ ಓದುವ ಹಾಗೂ ಇತರರೊಂದಿಗೆ ಮಾತೃಭಾಷೆಯಲ್ಲಿ ಮಾತನಾಡುವ ಕಲೆ ರೂಢಿಸಿಕೊಂಡಾಗ ನಮ್ಮತನ ಉಳಿಸಿ ಬೆಳೆಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಮಾತೃ ಭಾಷೆಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಎಂದು ಹೇಳಿದರು. ಎಂಇಎಸ್ ಗೌರವ ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ, ಸಮಾಜದಲ್ಲಿನ ಆಗು ಹೋಗುಗಳ ಬಗ್ಗೆ ಚಿಂತಿಸಿ ಚರ್ಚಾಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಮುಂದೆ ಸಾಮಾಜಿಕ, ರಾಜಕೀಯ ಅಥವಾ ಇನ್ಯಾವುದೇ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಲು ಸಾಧ್ಯ. ವಿವೇಕಾನಂದರು ಕೂಡಾ ವಿದೇಶದಲ್ಲಿ ನೀಡಿದ ದಿಕ್ಸೂಚಿ ಭಾಷಣದಿಂದಲೇ ಇಡೀ ಪ್ರಪಂಚ ಮಾತನಾಡುವಂತಾಯಿತು ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂಇಎಸ್ ಅಧ್ಯಕ್ಷ ಎನ್.ಕೇಶವಮೂರ್ತಿ, ಮಕ್ಕಳಿಗೆ ಚರ್ಚಾ ಸ್ಪರ್ಧೆಯಲ್ಲಿ ರಾಜಕೀಯ ಹೊರತು ಪಡಿಸಿ ವೈಚಾರಿಕತೆ ಮೂಡಿಸುವ ವಿಷಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಇದರಿಂದ ಮಕ್ಕಳು ಬೌದ್ಧಿಕವಾಗಿ ಮುನ್ನೆಡೆಯಲು ಸಾಧ್ಯ ಎಂದು ಸಲಹೆ ಮಾಡಿದರು. ಇದೇ ವೇಳೆ ಸುಮಾರು 15 ಶಾಲೆಗಳಿಂದ 30 ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪರ, ವಿರುದ್ಧ ಸ್ಪರ್ಧೆಯಲ್ಲಿ ಎಂಇಎಸ್ ಪ್ರಥಮ ಸ್ಥಾನ ಗಳಿಸಿತು. ದ್ವಿತೀಯ ಸ್ಥಾನ ಸಂಜೀವಿನಿ ವಿದ್ಯಾಸಂಸ್ಥೆ ಹಾಗೂ ತೃತೀಯ ಸ್ಥಾನವನ್ನು ಬೀಕನಹಳ್ಳಿಯ ಮೊರಾರ್ಜಿ ವಸತಿ ಶಾಲೆ ಪಡೆದು ಕೊಂಡಿತು.

ಈ ಸಂದರ್ಭದಲ್ಲಿ ಪ್ರಾಯೋಗಿಕ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಕೌಸರ್ ಫಾತಿಮಾ, ವ್ಯವಸ್ಥಾಪಕಿ ಶ್ರೀಲಕ್ಷ್ಮೀ, ಶಿಕ್ಷಕರಾದ ಸದಾಶಿವ, ಪ್ರತಿಮಾ, ಸುನೀತಾ, ತೀರ್ಪುಗಾರರಾದ ಹೇಮಾವತಿ, ಹನುಮಂತಪ್ಪ, ಪ್ರಭಾಕರ್ ಉಪಸ್ಥಿತರಿದ್ದರು.

28 ಕೆಸಿಕೆಎಂ 1ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆ ಪ್ರಾಯೋಗಿಕ ಪ್ರೌಢಶಾಲೆ ಸಹಯೋಗದಲ್ಲಿ ಮಂಗಳವಾರ ಬಿಇಡಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರ ಮಟ್ಟದ ಅಂತರ ಪ್ರೌಢಶಾಲಾ ಚರ್ಚಾ ಸ್ಪರ್ಧೆಯನ್ನು ಸೂರಿ ಶ್ರೀನಿವಾಸ್‌ ಉದ್ಘಾಟಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ