ಕನ್ನಡಪ್ರಭ ವಾರ್ತೆ ತುರುವೇಕೆರೆ
ಪಟ್ಟಣದ ಚೌದ್ರಿ ಕನ್ವೆನ್ಷನ್ ಹಾಲ್ ನಲ್ಲಿ ಲಯನ್ಸ್ ಕ್ಲಬ್ ವತಿಯಿಂದ 2026- 27ನೇ ಸಾಲಿನ ನೂತನ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಾನು ಬಡತನದ ಕಷ್ಟಗಳೇನು ಎಂಬುದನ್ನು ಬಲ್ಲೆ. ಅದನ್ನೂ ಎದೆಗುಂದದೆ ಎದುರಿಸಿದ್ದೇನೆ. ಮನುಷ್ಯನಿಗೆ ಜೀವನದಲ್ಲಿ ಕಷ್ಟ- ಸುಖಗಳು ಬರುತ್ತವೆ, ಹೋಗುತ್ತವೆ. ಆದರೆ ಕಷ್ಟ ಬಂದ ಸಂದರ್ಭದಲ್ಲಿ ಎದೆಗುಂದದೆ ಧೈರ್ಯವಾಗಿ ಎದುರಿಸಬೇಕು. ಆಗ ಮಾತ್ರ ಯಶಸ್ಸು ಗಳಿಸಲು ಮತ್ತು ಸಾಧನೆ ಮಾಡಲು ಸಾಧ್ಯ ಎಂದರು.
ತಮ್ಮ ಯಶಸ್ಸಿಗೆ ಸಹಕರಿಸಿದ ಕುಟುಂಬ ವರ್ಗ, ಸ್ನೇಹಿತರನ್ನು ಮರೆಯಲು ಸಾಧ್ಯವಿಲ್ಲ. ದುಡಿದ ಹಣದಲ್ಲಿ ಸ್ವಲ್ಪ ಭಾಗ ಸಮಾಜ ಸೇವೆಗೆ ಮೀಸಲಿಡಲಿದ್ದೇನೆ. ಲಯನ್ಸ್ ಕ್ಲಬ್ ನ ಎಲ್ಲ ಸದಸ್ಯರ ಸಹಕಾರದೊಂದಿಗೆ ಈ ವರ್ಷ ತಾಲೂಕಿನಲ್ಲಿ ಉತ್ತಮ ಸೇವಾ ಕಾರ್ಯಕ್ರಮ ಮಾಡಲು ಮುಂದಾಗಿದ್ದೇವೆ ಎಂದರು.ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಪಟ್ಟಣದ ಲಯನ್ಸ್ ಕ್ಲಬ್ ಉತ್ತಮ ಸೇವಾ ಕಾರ್ಯಕ್ರಮ ಮಾಡುತ್ತಿದೆ. ಒಂದು ವರ್ಷದಲ್ಲಿ ಸುನಿಲ್ ಬಾಬು ತಂಡ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ನೂತನ ಸದಸ್ಯರಾಗಿ ವೆಂಕಟಾಪುರ ಯೋಗೀಶ್, ಸಂತೋಷ್ ಕಂಟ್ಲಿ ಸೇರಿ ಹಲವರು ಸೇರ್ಪಡೆಯಾದರು. ಕಾರ್ಯಕ್ರಮಕ್ಕೆ ಆಗಮಿಸಿದ ಓರ್ವ ದಂಪತಿಗೆ ಲಾಟರಿ ಮೂಲಕ ಆಯ್ಕೆ ಮಾಡಿ ಬಹುಮಾನ ನೀಡಲಾಯಿತು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳ ಪದಾದಿಕಾರಿಗಳು, ಅಭಿಮಾನಿಗಳು, ಮುಖಂಡರು, ಹಿತೈಷಿಗಳು ಆಗಮಿಸಿ ನೂತನ ತಂಡಕ್ಕೆ ಶುಭ ಕೋರಿದರು.