ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ತೋಟಗಾರಿಕೆ ಅಧಿಕಾರಿ ಮಾಹಿತಿ । ಜಿಲ್ಲೆಯಲ್ಲಿ 1102 ಎಕರೆ ಬಾಳೆ ನಾಶವಾಗಿ ರೈತರಿಗೆ ಸಂಕಷ್ಟಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಸಂಗೋಪನಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 823 ಹೆಕ್ಟೇರ್ ಪ್ರದೇಶದಲ್ಲಿ ಬಾಳೆ ಬೆಳೆಯಲಾಗಿದ್ದು, ಜಿಲ್ಲೆಯಲ್ಲಿ 1102 ಎಕರೆ ಪ್ರದೇಶದಲ್ಲಿ ಬಾಳೆ ನಾಶವಾಗಿದೆ. ನಿಯಮಾವಳಿ ಪ್ರಕಾರ 186 ಲಕ್ಷ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ ನೀಡಿದರು.
ಈಗಾಗಲೇ 1900 ಕ್ವಿಂಟಲ್ ಗೊಬ್ಬರ ರೈತರಿಗೆ ವಿತರಣೆಯಾಗಿದೆ. ಇನ್ನೂ 6 ಸಾವಿರ ಕ್ವಿಂಟಲ್ ಗೊಬ್ಬರ ಲಭ್ಯವಿದ್ದು, ಬೀತ್ತನೆ ಬೀಜಗಳು ಸಹ ವಿತರಣೆ ಮಾಡಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ತಿಳಿಸಿದರು.
ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ ಜಿಲ್ಲೆಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಚಿವ ಕೆ. ವೆಂಕಟೇಶ್ ಹಾಗೂ ಎಚ್.ಸಿ. ಮಹದೇವಪ್ಪ ಸೂಚಿಸಿದರು.
ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ, ಯಳಂದೂರು ತಾಲೂಕಿನ ಗುಂಬಳ್ಳಿಯಲ್ಲಿ ನೀರು ಸೇವಿಸಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಟ್ಯಾಂಕ್, ಜಾಕ್‌ವೆಲ್‌ಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಲು ಕ್ರಮವಹಿಸಬೇಕು ಎಂದರು.
ಬಿಆರ್‌ಟಿ ಅರಣ್ಯ ವ್ಯಾಪ್ತಿಯ 8 ಹಾಡಿಗಳಿಗೆ ಜಲ ಜೀವನ್ ಯೋಜನೆಯಡಿ ಕುಡಿಯುವ ನೀರು ಸಂಪರ್ಕ ಮಾಡಿಲ್ಲ. ಅರಣ್ಯ ಕಾಯ್ದೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್, ಈ ಸಂಬಂಧ ಹುಲಿ ಯೋಜನೆ ಅಧಿಕಾರಿಗಳಿಗೆ ಆಪೂವಲ್‌ಗೆ ಕಳುಹಿಸಿಕೊಡಲಾಗಿತ್ತು. ಆದರೆ, ಅರಣ್ಯ ವ್ಯಾಪ್ತಿ ಅಂತ ಹೇಳಿ ಕಾಮಗಾರಿ ನಡೆಸಲು ಅವಕಾಶ ನೀಡಿಲ್ಲ ಆದ್ದರಿಂದ ಪಂಪ್‌ಹೌಸ್‌ನ ಪೊಕೇಷನ್ ಸ್ಥಳಾಂತರ ಮಾಡಿ ಕಾಮಗಾರಿ ನಡೆಸುವಂತೆ ತಿಳಿಸಿದರು. ಪಂಪ್‌ಹೌಸ್ ಲೊಕೇಷನ್ ಸ್ಥಳಾಂತರಿಸಿ ಕಾಮಗಾರಿ ನಡೆಸುವಂತೆ ಕೆ. ವೆಂಕಟೇಶ್ ಸೂಚಿಸಿದರು.
ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲಿ ಕೊಡಿಮೋಳೆ ಕೆರೆಗೆ ನೀರು ಪೂರೈಕೆಯಾಗುತ್ತಿದ್ದು, ಅಲ್ಲಿಂದ ಮುಂದಿನ ಕೆರೆಗಳಿಗೆ ನೀರು ಸರಬರಾಜು ಮಾಡಲು ವಿಳಂಬ ಮಾಡಿದ್ದಾರೆ. ನೂರಾರು ಕೋಟಿ ರು. ಯೋಜನೆ ನಿಂತಿದೆ ರೈತರಿಗೆ ನೀಡಬೇಕಾದ ಪರಿಹಾರ ನೀಡಿ ಕಾಮಗಾರಿ ಮುಗಿಸಿ ಮುಖ್ಯಮಂತ್ರಿಗಳಿಂದ ಚಾಲನೆ ನೀಡಿಸಬೇಕಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟರು ಸಭೆಯಲ್ಲಿ ಚರ್ಚಿಸಿದರು. ಜಿಲ್ಲಾಧಿಕಾರಿ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಆದೇಶಿಸಿದರು.